ಚೆನ್ನೈ(ತಮಿಳುನಾಡು): ತಮಿಳುನಾಡಿನ ನೀಲಿಗಿರಿಯಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಐಎಎಫ್ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬದುಕುಳಿದಿದ್ದು, ಹೆಚ್ಚುವರಿ ಚಿಕಿತ್ಸೆಗಾಗಿ ಅವರನ್ನ ತಮಿಳುನಾಡಿನ ವೆಲ್ಲಿಂಗ್ಟನ್ ಆಸ್ಪತ್ರೆಯಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಕಮಾಂಡೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಸೇನಾ ಮುಖಂಡ ಬಿಪಿನ್ ರಾವತ್ ಅವರ ಪತ್ನಿ ಸೇರಿದಂತೆ 13 ಮಂದಿ ದುರ್ಮರಣಕ್ಕೀಡಾಗಿದ್ದು, ಕ್ಯಾಪ್ಟನ್ ವರುಣ್ ಸಿಂಗ್ ಬದುಕುಳಿದಿದ್ದಾರೆ. ಈಗಾಗಲೇ ತಮಿಳುನಾಡಿನ ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.
ಲೈಫ್ ಸಪೋರ್ಟ್ ವ್ಯವಸ್ಥೆಯಲ್ಲಿರುವ ವರುಣ್ ಸಿಂಗ್ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಮುಂದಿನ 48 ಗಂಟೆಗಳ ಅವಧಿ ನೀಡಿದ್ದಾರೆ. ಇದರ ಬೆನ್ನಲ್ಲೇ ಅವರನ್ನ ಬೆಂಗಳೂರಿನ ಸೇನಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.