ಚೆನ್ನೈ (ತಮಿಳುನಾಡು):ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹಿರಿಯ ಐಪಿಎಸ್ ಅಧಿಕಾರಿ, ವಿಶೇಷ ಪೊಲೀಸ್ ಮಹಾನಿರ್ದೇಶಕರನ್ನು ತಮಿಳುನಾಡು ಸರ್ಕಾರ ನಿನ್ನೆ ಅಮಾನತುಗೊಳಿಸಿದೆ.
ಈ ಪ್ರಕರಣದ ಮೇಲ್ವಿಚಾರಣೆ ನಡೆಸುತ್ತಿರುವ ಮದ್ರಾಸ್ ಹೈಕೋರ್ಟ್, ಈ ಹಿಂದೆ ಮಹಿಳಾ ಪೊಲೀಸ್ ಅಧಿಕಾರಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಚೆಂಗಲ್‌ಪೇಟೆ ಎಸ್‌ಪಿಯನ್ನು ತಕ್ಷಣವೇ ಸರ್ಕಾರ ಸಸ್ಪೆಂಡ್ ಮಾಡಿತ್ತು. ಆದರೆ, ವಿಶೇಷ ಡಿಜಿಪಿಯನ್ನು ಇನ್ನೂ ಏಕೆ ಅಮಾನತುಗೊಳಿಸಲಾಗಿಲ್ಲ ಎಂದು ಪ್ರಶ್ನಿಸಿತ್ತು. ನ್ಯಾಯಾಲಯ ಪ್ರಶ್ನಿಸಿದ ಎರಡು ದಿನಗಳ ಬಳಿಕ ಸರ್ಕಾರ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದೆ.