ಚೆನ್ನೈ(ತಮಿಳುನಾಡು):ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕಕ್ಕೆ ತಮಿಳುನಾಡು ಅವಕಾಶ ನೀಡುವುದಿಲ್ಲ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ಎಸ್. ದುರೈಮುರುಗನ್ ಹೇಳಿದ್ದು, ಮೇಕೆದಾಟು ಅಣೆಕಟ್ಟು ನಿರ್ಮಿಸುವುದರಿಂದ ತಮಿಳುನಾಡಿಗೆ ಬರುವ ಕಾವೇರಿ ನೀರನ್ನು ನಿಲ್ಲಿಸಲಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ತನ್ನ ಬಜೆಟ್ ಅನ್ನು 1,000 ಕೋಟಿಯಿಂದ ಮೀಸಲಿಡಲಾಗಿದೆ. ಅದನ್ನು 5,000 ಕೋಟಿಗೆ ಹೆಚ್ಚಿಸಿದರೂ, ಅಣೆಕಟ್ಟು ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ. ತಮಿಳುನಾಡಿನ ಜನರು ಅಣೆಕಟ್ಟು ನಿರ್ಮಾಣಕ್ಕೆ ಒಂದೇ ಒಂದು ಇಟ್ಟಿಗೆಯನ್ನು ಇಡಲೂ ಅವಕಾಶ ನೀಡುವುದಿಲ್ಲ ಎಂದಿದ್ದಾರೆ. ಅಣೆಕಟ್ಟು ನಿರ್ಮಾಣವನ್ನು ತಡೆಯಲು ಲಭ್ಯವಿರುವ ಎಲ್ಲ ಕಾನೂನು ಮಾರ್ಗಗಳನ್ನು ತಮಿಳುನಾಡು ಅನುಸರಿಸುತ್ತಿದೆ.
ಕರ್ನಾಟಕ ರಾಜ್ಯವು ಕಾವೇರಿ ನದಿಯ ಮೇಲಿನ ಎಲ್ಲ ಹಕ್ಕುಗಳನ್ನು ಪಡೆಯುವುದು ಸಾಧ್ಯವಿಲ್ಲ. ಮೇಕೆದಾಟು ಅಣೆಕಟ್ಟು ನಿರ್ಮಿಸುವುದು ಸಿಡಬ್ಲ್ಯೂಡಿಟಿ ಹಾಗೂ ಸುಪ್ರೀಂಕೋರ್ಟ್‌ನ ತೀರ್ಪಿನ ಸಂಪೂರ್ಣ ಉಲ್ಲಂಘನೆಯಾಗಿದೆ ಎಂದು ದುರೈಮುರುಗನ್ ಹೇಳಿದ್ದಾರೆ.