ನವದೆಹಲಿ: ದೇಶಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 4,575 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದು ಹಿಂದಿನ ದಿನಕ್ಕಿಂತ ಸ್ವಲ್ಪ ಹೆಚ್ಚಾಗಿದೆ(ಸೋಮವಾರ- 3,993) ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಮಂಗಳವಾರ ದೇಶದಲ್ಲಿ 145 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 5,15,355ಕ್ಕೆ ಏರಿಕೆಯಾಗಿದೆ. ಪಾಸಿಟಿವಿ ದರ ಶೇ. 0.62 ರಷ್ಟಿದ್ದು, 46,962 ಸಕ್ರಿಯ ಪ್ರಕರಣಗಳಿವೆ. ನಿನ್ನೆ 7,416 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಗುಣಮುಖರಾದವರ ಸಂಖ್ಯೆ 4,24,13,566 ಕ್ಕೆ ತಲುಪಿದೆ.