ಭೋಪಾಲ್: ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಮಂಗಳವಾರ ಎರಡೂವರೆ ವರ್ಷದ ಬಾಲಕಿಯೊಬ್ಬಳು ಬೋರ್‌ವೆಲ್‌ಗೆ ಬಿದ್ದಿದ್ದು, ಮೃತಪಟ್ಟಿದ್ದಾಳೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಮತ್ತು ಜಿಲ್ಲಾಡಳಿತ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ಕೈಗೊಂಡಿತ್ತಾದರೂ ಬಾಲಕಿಯನ್ನು ರಕ್ಷಿಸುವಲ್ಲಿ ವಿಫಲವಾಗಿದೆ.
ವಿದಿಶಾದಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕಿ: ವಿದಿಶಾ ಜಿಲ್ಲೆಯ ಸಿರೊಂಜ್ ತಹಸಿಲ್ ವ್ಯಾಪ್ತಿಯ ಕಜ್ರಾಯ್ ಗ್ರಾಮದಿಂದ ಈ ಘಟನೆ ವರದಿಯಾಗಿತ್ತು. ಮಧ್ಯಪ್ರದೇಶದ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಅವರು ವಿದಿಶಾ ಜಿಲ್ಲಾಧಿಕಾರಿಗೆ ದೂರವಾಣಿ ಮೂಲಕ ಮಾತನಾಡಿ ಮಗುವನ್ನು ರಕ್ಷಿಸಲು ತ್ವರಿತ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಸಚಿವರ ನಿರ್ದೇಶನದಂತೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ, ತ್ವರಿತ ಕಾರ್ಯಾಚರಣೆ ಕೈಗೊಂಡರಾದರೂ, ಬಾಲಕಿಯನ್ನು ಜೀವಂತವಾಗಿ ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ.
ತ್ವರಿತ ಕಾರ್ಯಾಚರಣೆಗೆ ಸಚಿವರ ಸೂಚನೆ: "ಶೀಘ್ರ ರಕ್ಷಣಾ ಕಾರ್ಯಾಚರಣೆಗಾಗಿ ನಾನು ವಿದಿಶಾ ಜಿಲ್ಲಾಡಳಿತವನ್ನು ಕೇಳಿದ್ದೇನೆ. ಎಸ್‌ಡಿಆರ್‌ಎಫ್ ತಂಡವೂ ಸ್ಥಳಕ್ಕೆ ಧಾವಿಸಿದೆ. ನಾನು ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದೇನೆ ಮತ್ತು ಮಗುವಿನ ಜೀವ ಉಳಿಸಲು ಯಾವುದೇ ಸಹಾಯ ಮಾಡಲು ನಾನು ಸಿದ್ಧನಿದ್ದೇನೆ ಎಂದು ಭರವಸೆ ನೀಡಿದ್ದೇನೆ. ರಾಜ್ಯ ಸರ್ಕಾರದಿಂದ ನೀಡಲಾಗುವುದು ಎಂದು ಮಧ್ಯಪ್ರದೇಶದ ಸಚಿವ ವಿಶ್ವಾಸ್ ಸಾರಂಗ್ ಈ ಮೊದಲು ಹೇಳಿದ್ದರು.