ಹೈದರಾಬಾದ್, ತೆಲಂಗಾಣ:ಟಾಲಿವುಡ್ ನಟ ಸಾಯಿ ಧರಂತೇಜ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ನ ಅಪೋಲೋ ಆಸ್ಪತ್ರೆ ಆರೋಗ್ಯ ಬುಲೆಟಿನ್ ಬಿಡುಗಡೆ ಮಾಡಿದೆ. ಸಾಯಿ ಧರಂ ತೇಜ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಎಲ್ಲ ಅಂಗಾಂಗಗಳೂ ಸರಿಯಾಗಿ ಕೆಲಸ ಮಾಡುತ್ತಿವೆ ಎಂದು ಬುಲೆಟಿನ್ನಲ್ಲಿ ಉಲ್ಲೇಖಿಸಲಾಗಿದೆ.
ಸದ್ಯಕ್ಕೆ ಸಾಯಿ ಧರಂತೇಜ್ಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಿನಪೂರ್ತಿ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗುತ್ತದೆ. ಮುಂದಿನ ಆರೋಗ್ಯ ಬುಲೆಟಿನ್ ನಾಳೆ ಬಿಡುಗಡೆಯಾಗುತ್ತದೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.