ಕರ್ನಾಟಕ

karnataka

ETV Bharat / bharat

ಪ್ರತಿಭಟನಾ ನಿರತ ರೈತರನ್ನು ಕೃಷಿ ಸಚಿವ ತೋಮರ್​ ಭೇಟಿ ಮಾಡಲಿದ್ದಾರೆ : ಅಮಿತ್ ಶಾ ಮಾಹಿತಿ

ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆ ಬಗ್ಗೆ ಚರ್ಚಿಸಲು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ರೈತರ ಪ್ರತಿನಿಧಿಗಳನ್ನು ಭೇಟಿ ಮಾಡಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

Tomar may meet protesting farmers in a day or two
ಪ್ರತಿಭಟನಾ ನಿರತ ರೈತರನ್ನು ಭೇಟಿ ಮಾಡಲಿದ್ದಾರೆ ತೋಮರ್

By

Published : Dec 21, 2020, 7:29 AM IST

ಬೋಲ್ಪುರ್ (ಪಶ್ಚಿಮ ಬಂಗಾಳ): ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಒಂದೆರಡು ದಿನಗಳಲ್ಲಿ ಕೃಷಿ ಕಾನೂನುಗಳನ್ನು ರದ್ದುಪಡಿಸಲು ಒತ್ತಾಯಿಸಿ ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಗಳನ್ನು ಭೇಟಿಯಾಗಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.

ಪಶ್ವಿಮ ಬಂಗಾಳದ ಬೋಲ್ಪುರದಲ್ಲಿ ರೋಡ್​ ಶೋ ನಡೆಸಿದ ನಂತರ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಶಾ, "ನನಗೆ ಸಮಯದ ಬಗ್ಗೆ ನಿಖರವಾಗಿ ತಿಳಿದಿಲ್ಲ, ಆದರೆ ಒಂದೆರಡು ದಿನಗಳಲ್ಲಿ ಅವರ ಬೇಡಿಕೆ ಬಗ್ಗೆ ಚರ್ಚಿಸಲು ಸಚಿವ ನರೇಂದ್ರ ಸಿಂಗ್ ತೋಮರ್, ರೈತರ ಪ್ರತಿನಿಧಿಗಳನ್ನು ಭೇಟಿ ಮಾಡಲಿದ್ದಾರೆ" ಎಂದು ತಿಳಿಸಿದ್ದಾರೆ.

ಓದಿಭಾರತದಲ್ಲಿ ಪ್ರಜಾಪ್ರಭುತ್ವ ಪುನಃಸ್ಥಾಪಿಸಲು ರಾಹುಲ್ ಗಾಂಧಿಯಿಂದ ಮಾತ್ರ ಸಾಧ್ಯ: ಟಿಪಿಸಿಸಿ

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿ ಸಾವಿರಾರು ರೈತರು ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶದ ಗಡಿಯಲ್ಲಿ ಸುಮಾರು ನಾಲ್ಕು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ABOUT THE AUTHOR

...view details