ಕರ್ನಾಟಕ

karnataka

ETV Bharat / bharat

ಲೇಖಕಿ ಗೀತಾಂಜಲಿ ಶ್ರೀ ಅವರ 'ಟಾಂಬ್ ಆಫ್ ಸ್ಯಾಂಡ್'ಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ

ಲೇಖಕಿ ಗೀತಾಂಜಲಿ ಶ್ರೀ ಅವರ ಕಾದಂಬರಿ ‘ಟಾಂಬ್ ಆಫ್ ಸ್ಯಾಂಡ್’ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದುಕೊಂಡಿದೆ.

ಗೀತಾಂಜಲಿ ಶ್ರೀ
ಗೀತಾಂಜಲಿ ಶ್ರೀ

By

Published : May 27, 2022, 6:48 AM IST

ನವದೆಹಲಿ: 2022ನೇ ಸಾಲಿನ ಪ್ರತಿಷ್ಠಿತ ಅಂತರರಾಷ್ಟ್ರೀಯ 'ಬೂಕರ್ ಪ್ರಶಸ್ತಿ'ಯು ಲೇಖಕಿ ಗೀತಾಂಜಲಿ ಶ್ರೀ ಅವರ 'ಟಾಂಬ್ ಆಫ್ ಸ್ಯಾಂಡ್' ಕಾದಂಬರಿಗೆ ಲಭಿಸಿದೆ. ಈ ಕೃತಿಯನ್ನು ಅಮೆರಿಕದ ಡೇಸಿ ರಾಕ್​ವೆಲ್ ಇಂಗ್ಲಿಷ್​ಗೆ ಅನುವಾದಿಸಿದ್ದರು.

50 ಸಾವಿರ ಪೌಂಡ್ ಮೌಲ್ಯದ ಸಾಹಿತ್ಯ ಪ್ರಶಸ್ತಿಗೆ ಜಗತ್ತಿನ ನಾನಾ ಭಾಗಗಳಿಂದ ಅನೇಕ ಮಹತ್ವದ ಪುಸ್ತಕಗಳು ಸ್ಪರ್ಧೆಯಲ್ಲಿದ್ದವು. ಆದರೆ ಅಂತಿಮವಾಗಿ, ಗೀತಾಂಜಲಿ ಶ್ರೀ ಅವರ ಈ ಕೃತಿಗೆ ಪ್ರಶಸ್ತಿ ಲಭಿಸಿದೆ. ಇದು ಬೂಕರ್‌ ಪ್ರಶಸ್ತಿ ಪಡೆದ ಮೊದಲ ಹಿಂದಿ ಭಾಷೆಯ ಕಾದಂಬರಿಯಾಗಿದೆ.

ಉತ್ತರ ಪ್ರದೇಶದ ಮೈನ್‌ಪುರಿಯಲ್ಲಿ ಜನಿಸಿದ ಗೀತಾಂಜಲಿ ದೆಹಲಿ ನಿವಾಸಿ. ಇವರು ಮೂರು ಕಾದಂಬರಿಗಳು ಮತ್ತು ಹಲವು ಕಥೆಗಳನ್ನು ಬರೆದಿದ್ದಾರೆ. ಇದರಲ್ಲಿ ಹಲವು ಪುಸ್ತಕಗಳು ಇಂಗ್ಲಿಷ್, ಫ್ರೆಂಚ್, ಜರ್ಮನ್ ಹಾಗೂ ಕೊರಿಯಾ ಭಾಷೆಗಳಿಗೆ ಭಾಷಾಂತರಗೊಂಡಿವೆ.

‘ಟಾಂಬ್ ಆಫ್ ಸ್ಯಾಂಡ್’ ಬ್ರಿಟನ್​ನಲ್ಲಿ ಪ್ರಕಟವಾಗಿರುವ ಅವರ ಮೊದಲ ಕೃತಿಯಾಗಿದೆ. ಈ ಕಾದಂಬರಿಯು ಉತ್ತರ ಭಾರತದ 80 ವರ್ಷದ ವೃದ್ಧೆ ತನ್ನ ಪತಿಯನ್ನು ಕಳೆದುಕೊಂಡ ಬಳಿಕ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗುವುದು ಮತ್ತು ಅದರಿಂದ ಹೊರಬರುವುದು ಸೇರಿದಂತೆ ಹಲವು ವಿಭಿನ್ನ ಕಥಾಹಂದರವನ್ನು ಒಳಗೊಂಡಿದೆ.

ಇದನ್ನೂ ಓದಿ:2 ವರ್ಷದಲ್ಲಿ 15 ಮದುವೆ; ಇಬ್ಬರು ಮಕ್ಕಳ ತಾಯಿ: ಹನಿಮೂನ್​ ಹೆಸರಲ್ಲಿ ವಂಚಿಸುತ್ತಿದ್ದವಳ ಬಂಧನ!

ABOUT THE AUTHOR

...view details