ನವದೆಹಲಿ:ನನ್ನ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದ ಯಾವುದೇ ದಾಖಲೆಗಳು ಮಾಧ್ಯಮಗಳಿಗೆ ನೀಡದಂತೆ ಪೊಲೀಸರಿಗೆ ಸೂಚಿಸಬೇಕು ಎಂದು ಕೋರಿ, ಟೂಲ್ಕಿಟ್ ಹಂಚಿಕೊಂಡ ಆರೋಪದಲ್ಲಿ ಬಂಧಿತರಾಗಿರುವ ಪರಿಸರ ಕಾರ್ಯಕರ್ತೆ ದಿಶಾ ರವಿ ಗುರುವಾರ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹೈಕೋರ್ಟ್‌ನಲ್ಲಿ ಪಟ್ಟಿ ಸಿದ್ಧವಾಗುವುದನ್ನು ಕಾಯುತ್ತಿದ್ದೇನೆ. ಇದಾದ ಬಳಿಕ ನಾನು ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ದಿಶಾ ರವಿ ಅವರನ್ನು ಪ್ರತಿನಿಧಿಸುವ ವಕೀಲ ಅಭಿನವ್ ಸೆಖ್ರಿ ಹೇಳಿದ್ದಾರೆ.