ನವದೆಹಲಿ: ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಹೀರೋ ಮೋಟೋಕಾರ್ಪ್ನ ಹಿರಿಯ ಅಧಿಕಾರಿಗಳ ನಿವಾಸ ಮತ್ತು ಕಚೇರಿ ಮೇಲೆ ಐಟಿ ದಾಳಿ ನಡೆಸಿದೆ. ಹೀರೋ ಮೋಟೋಕಾರ್ಪ್ ಅಧ್ಯಕ್ಷ ಪವನ್ ಮುಂಜಾಲ್ ಮತ್ತು ಕಂಪನಿಯ ಇತರ ಹಿರಿಯ ಅಧಿಕಾರಿಗಳು ಮತ್ತು ಅವರೊಂದಿಗೆ ಸಂಪರ್ಕ ಹೊಂದಿದ ಹಲವಾರು ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ಶೋಧ ನಡೆಸುತ್ತಿದೆ.
ಹೀರೋ ಮೋಟೋಕಾರ್ಪ್ ಅಧ್ಯಕ್ಷ ಹಾಗೂ ಹಿರಿಯ ಅಧಿಕಾರಿಗಳಿಗೆ ಐಟಿ ಶಾಕ್ - ಹೀರೋ ಮೋಟೋಕಾರ್ಪ್ ಅಧ್ಯಕ್ಷರ ಮೇಲೆ ದಾಳಿ
ಐಟಿ ಅಧಿಕಾರಿಗಳು ಹೀರೋ ಮೋಟೋಕಾರ್ಪ್ ಹಿರಿಯ ಅಧಿಕಾರಿಗಳ ನಿವಾಸ ಮತ್ತು ಕಚೇರಿ ಮೇಲೆ ಐಟಿ ದಾಳಿ ನಡೆಸಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಹೀರೋ ಮೋಟೋಕಾರ್ಪ್ ಅಧ್ಯಕ್ಷ, ಹಿರಿಯ ಅಧಿಕಾರಿಗಳಿಗೆ ಐಟಿ ಶಾಕ್
ಪವನ್ ಮುಂಜಾಲ್ ಮತ್ತು ಇತರ ಅಧಿಕಾರಿಗಳ ಕಚೇರಿಗಳು ಮತ್ತು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಗುರುಗ್ರಾಮ್, ಹರಿಯಾಣ, ದೆಹಲಿ ಮತ್ತು ಇತರ ಕೆಲವು ಸ್ಥಳಗಳಲ್ಲಿರುವ ಶೋಧಕಾರ್ಯ ಮುಂದುವರೆದಿದೆ ಎಂದು ತಿಳಿದುಬಂದಿದೆ. ಮೋಟೋಕಾರ್ಪ್ ಮತ್ತು ಅದಕ್ಕೆ ಸಂಬಂಧಿಸಿದವರ ಹಣಕಾಸು ದಾಖಲೆಗಳು ಮತ್ತು ಇತರ ವಹಿವಾಟುಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಆದಾಯ ತೆರಿಗೆ ಇಲಾಖೆಯ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಮಕ್ಕಳ ಬಾಳಲ್ಲಿ ಕಹಿ ಮೂಡಿಸಿದ ಸಿಹಿ.. ಮಿಠಾಯಿ ತಿಂದು ಒಂದೇ ಕುಟುಂಬದ ಮೂವರು ಮಕ್ಕಳು ಸೇರಿ ನಾಲ್ಕು ಕಂದಮ್ಮಗಳ ಸಾವು!