ಪುಲ್ವಾಮಾ(ಜಮ್ಮು):ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಎನ್ಕೌಂಟರ್ನಲ್ಲಿ ಎಲ್ಇಟಿ ಉಗ್ರ ಸಂಘಟನೆಗೆ ಸೇರಿದ್ದ ಟಾಪ್ ಕಮಾಂಡೋ ಸೇರಿ ಐವರು ಉಗ್ರರು ಹತರಾಗಿದ್ದಾರೆ.
ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಸೇನೆ ಭಾಗಿ ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಈ ಘಟನೆಯಲ್ಲಿ ಎಲ್ಇಟಿ ಉಗ್ರ ಸಂಘಟನೆಗೆ ಸೇರಿದ್ದ ಐವರನ್ನು ಹತ್ಯೆ ಮಾಡಲಾಗಿದ್ದು, ಓರ್ವ ಯೋಧ ಹುತಾತ್ಮನಾಗಿದ್ದಾನೆ. ಉಳಿದಂತೆ ಮತ್ತೋರ್ವ ಯೋಧ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಸೇನಾ ಮೂಲಗಳು ಮಾಹಿತಿ ನೀಡಿವೆ.
ಎಲ್ಇಟಿ ಉಗ್ರ ಸೇರಿ ಐವರ ಹತ್ಯೆ ಪುಲ್ವಾಮಾ ಜಿಲ್ಲೆಯ ರಾಜ್ಪೋರಾ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಆಧರಿಸಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ ಉಗ್ರರು-ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮಾತನಾಡಿರುವ ಐಜಿಪಿ ವಿಜಯ್ ಕುಮಾರ್, ಕಾರ್ಯಾಚರಣೆಯಲ್ಲಿ ನಾವು ಯಶಸ್ಸು ಕಂಡಿದ್ದೇವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿರಿ: ಬ್ಯಾಟ್ ಬ್ಯಾಲೆನ್ಸ್ ಚಾಲೆಂಜ್: ವಿರಾಟ್-ಅನುಷ್ಕಾ ಮಧ್ಯೆ ಗೆದ್ದಿದ್ಯಾರು? ವಿಡಿಯೋ ನೋಡಿ..
ಜಮ್ಮುಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಕಣಿವೆ ನಾಡಿನ 14 ರಾಜಕೀಯ ಮುಖಂಡರೊಂದಿಗೆ ಮಹತ್ವದ ಸಭೆ ನಡೆಸಿದ ಬಳಿಕ ಮೇಲಿಂದ ಮೇಲೆ ಉಗ್ರರು-ಭಾರತೀಯ ಸೇನೆ ನಡುವೆ ಗುಂಡಿನ ದಾಳಿ ನಡೆಯುತ್ತಿದ್ದು, ಯೋಧರು ತಿರುಗೇಟು ನೀಡುತ್ತಿದ್ದಾರೆ.