ನವದೆಹಲಿ:ಕಳೆದ ಸೋಮವಾರದಿಂದ ಸಂಸತ್ ಅಧಿವೇಶನ ಆರಂಭಗೊಂಡಿದ್ದು, ಪ್ರತಿಪಕ್ಷಗಳು ಕೇಳುತ್ತಿರುವ ಅನೇಕ ಪ್ರಶ್ನೆಗಳಿಗೆ ಕೇಂದ್ರ ಲಿಖಿತ ರೂಪದಲ್ಲಿ ಉತ್ತರ ನೀಡುತ್ತಿದೆ. ಇದೀಗ ದೇಶದಲ್ಲಿ 2020ರಲ್ಲಿ ನಡೆದಿರುವ ರಸ್ತೆ ಅಪಘಾತದ ಬಗ್ಗೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರದ ಮಾಹಿತಿ ಪ್ರಕಾರ 2020ರಲ್ಲಿ ಒಟ್ಟು 3,66,138 ರಸ್ತೆ ಅಪಘಾತ ಸಂಭವಿಸಿದ್ದು, 1,31,714 ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆಂಬ ಮಾಹಿತಿ ನೀಡಿದ್ದಾರೆ. ಉಳಿದಂತೆ 2019ರಲ್ಲಿ ಒಟ್ಟು 4,49,002 ರಸ್ತೆ ಅಪಘಾತ ಸಂಭವಿಸಿದ್ದು, ಈ ವೇಳೆ, 1,51,113 ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆಂಬ ಮಾಹಿತಿ ನೀಡಿದ್ದಾರೆ. 2018ರಲ್ಲಿ 1,40,843 ಜನರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಮಾಹಿತಿ ಸಹ ಲೋಕಸಭೆಗೆ ನೀಡಿದ್ದಾರೆ.