ನವದೆಹಲಿ: ಭಾರತದಲ್ಲಿ ಕೊರೊನಾ ಅಬ್ಬರಿಸುತ್ತಿಲ್ಲವಾದರೂ ಜನರು ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳುವುದನ್ನು ಮುಂದುವರೆಸಬೇಕಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ಮೂರನೇ ಅಲೆ ಬೀಸುತ್ತಿದ್ದು, ಇದು ನೆರೆಯ ಉತ್ತರ ಪ್ರದೇಶ, ಪಂಜಾಬ್ ಹಾಗೂ ಹರಿಯಾಣ ರಾಜ್ಯಗಳಿಗೂ ಎಚ್ಚರಿಕೆಯ ಕರೆ ಗಂಟೆ ಬಾರಿಸಿದೆ.
ದೇಶದಲ್ಲಿ 41,322 ಮಂದಿ ಕೊರೊನಾ ಸೋಂಕಿತರು ಪತ್ತೆ... ಕೇಸ್ಗಳ ಸಂಖ್ಯೆ 93.5 ಲಕ್ಷಕ್ಕೆ ಏರಿಕೆ - ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ
ದೇಶದಲ್ಲಿನ 93,51,110 ಸೋಂಕಿತರ ಪೈಕಿ 87,59,969 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಭಾರತದಲ್ಲಿ ಕೋವಿಡ್ ಸೋಂಕಿತರು
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 41,322 ಕೋವಿಡ್ ಕೇಸ್ಗಳು ಪತ್ತೆಯಾಗಿದ್ದು, 485 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 93,51,110 ಹಾಗೂ ಮೃತರ ಸಂಖ್ಯೆ 1,36,200ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 87,59,969 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 4,54,940 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.