ನವದೆಹಲಿ:ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 13,083 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 137 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,07,33,131 ಹಾಗೂ ಮೃತರ ಸಂಖ್ಯೆ 1,54,147ಕ್ಕೆ ಏರಿಕೆಯಾಗಿದೆ.
ಆದರೆ ಒಟ್ಟು ಸೋಂಕಿತರ ಪೈಕಿ 1,04,09,160 ಮಂದಿ ವೈರಸ್ನಿಂದ ಗುಣಮುಖರಾಗಿದ್ದು, 1,69,824 ಕೇಸ್ಗಳು ಮಾತ್ರ ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಭಾರತದಲ್ಲಿ ಈವರೆಗೆ 33.68 ಲಕ್ಷ ಮಂದಿಗೆ ಲಸಿಕೆ ದೇಶದಲ್ಲಿ ಕೊರೊನಾ ವ್ಯಾಕ್ಸಿನೇಷನ್ ಪ್ರಮಾಣ ಕೂಡ ದಿನೇದಿನೇ ಹೆಚ್ಚುತ್ತಿದೆ. ಈವರೆಗೆ 62,939 ಸೆಷನ್ಗಳಲ್ಲಿ 33,68,734 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿದೆ. ನಿನ್ನೆ ಒಂದೇ ದಿನ 10,061 ಸೆಷನ್ಗಳಲ್ಲಿ 4,40,681 ಮಂದಿ ವ್ಯಾಕ್ಸಿನ್ ಪಡೆದಿದ್ದಾರೆ.
ಕೋವಿಡ್ ಟೆಸ್ಟಿಂಗ್ ಅಪ್ಡೇಟ್ಸ್ ಜನವರಿ 29ರ ವರೆಗೆ 19,58,37,408 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 7,56,329 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.