ನವದೆಹಲಿ:ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 12,899 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 107 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಪ್ರಕರಣಗಳ ಸಂಖ್ಯೆ 1,07,90,183 ಹಾಗೂ ಮೃತರ ಸಂಖ್ಯೆ 1,54,703ಕ್ಕೆ ಏರಿಕೆಯಾಗಿದೆ.
ಆದರೆ ಒಟ್ಟು ಸೋಂಕಿತರ ಪೈಕಿ 1,04,80,455 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 1,55,025 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕೋವಿಡ್ ಟೆಸ್ಟಿಂಗ್ ಅಪ್ಡೇಟ್ಸ್ ಫೆಬ್ರವರಿ 3ರ ವರೆಗೆ 19,92,16,019 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 7,42,841 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.
ಜನವರಿ 16 ರಂದು ಭಾರತದಲ್ಲಿ ವಿಶ್ವದ ಅತಿದೊಡ್ಡ ಕೊರೊನಾ ವ್ಯಾಕ್ಸಿನ್ ಡ್ರೈವ್ ಆರಂಭವಾಗಿದ್ದು, ಈವರೆಗೆ ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರು ಸೇರಿ ಒಟ್ಟು 44,49,552 ಮಂದಿಗೆ ಲಸಿಕೆ ನೀಡಲಾಗಿದೆ.