ಕರ್ನಾಟಕ

karnataka

By

Published : Feb 12, 2021, 10:01 AM IST

ETV Bharat / bharat

ನಿನ್ನೆ 9 ಸಾವಿರ ಕೋವಿಡ್​ ಕೇಸ್​, 87 ಸಾವು ವರದಿ.. ಈವರೆಗೆ 75 ಲಕ್ಷ ಮಂದಿಗೆ ವ್ಯಾಕ್ಸಿನ್​

ಜನವರಿ 16ರಿಂದ ಇಲ್ಲಿಯವರೆಗೆ ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್​ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರು ಸೇರಿ 75,05,010 ಮಂದಿಗೆ ಲಸಿಕೆ ನೀಡಲಾಗಿದೆ..

Total number of corona cases, deaths, Vaccination in India
ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​

ನವದೆಹಲಿ :ಕಳೆದ 24 ಗಂಟೆಗಳಲ್ಲಿ 9,309 ಕೋವಿಡ್​ ಸೋಂಕಿತರು ಪತ್ತೆಯಾಗಿದ್ದು, 87 ಮಂದಿ ವೈರಸ್​ಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಪ್ರಕರಣಗಳ ಸಂಖ್ಯೆ 1,08,80,603 ಹಾಗೂ ಮೃತರ ಸಂಖ್ಯೆ 1,55,447ಕ್ಕೆ ಏರಿಕೆಯಾಗಿದೆ.

ಆದರೆ ಒಟ್ಟು ಸೋಂಕಿತರ ಪೈಕಿ ಶೇ.97ಕ್ಕೂ ಅಧಿಕ ಅಂದರೆ 1,05,89,230 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಉಳಿದಂತೆ 1,35,926 ಕೇಸ್​​ಗಳು ಮಾತ್ರ ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಜನವರಿ 16ರಿಂದ ಇಲ್ಲಿಯವರೆಗೆ ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್​ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರು ಸೇರಿ 75,05,010 ಮಂದಿಗೆ ಲಸಿಕೆ ನೀಡಲಾಗಿದೆ. ಕೊವ್ಯಾಕ್ಸಿನ್​ ಹಾಗೂ ಕೊವಿಶೀಲ್ಡ್​ - ಈ ಎರಡೂ ಲಸಿಕೆಗಳು ಸುರಕ್ಷಿತ ಹಾಗೂ ಪರಿಣಾಮಕಾರಿ. ಲಸಿಕೆ ಪಡೆಯಲು ಯಾರೂ ಹಿಂಜರಿಯಬಾರದು ಎಂದು ಆರೋಗ್ಯ ಇಲಾಖೆ ಮತ್ತೆ ಮತ್ತೆ ಹೇಳುತ್ತಲೇ ಇದೆ.

ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​

ಫೆಬ್ರವರಿ​ 11ರ ವರೆಗೆ 20,47,89,784 ಜನರಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದ್ದು, ನಿನ್ನೆ ಒಂದೇ ದಿನ 7,65,944 ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.

ABOUT THE AUTHOR

...view details