ಕರ್ನಾಟಕ

karnataka

ETV Bharat / bharat

ಭಾರತದಲ್ಲಿ ಕೊರೊನಾ ಆ್ಯಕ್ಟಿವ್​ ಕೇಸ್​ಗಳ ಸಂಖ್ಯೆ 1.36 ಲಕ್ಷಕ್ಕೆ ಇಳಿಕೆ.. 79 ಲಕ್ಷ ಮಂದಿಗೆ ಲಸಿಕೆ

1.8 ಕೋಟಿ ಕೊರೊನಾ ಸೋಂಕಿತರಲ್ಲಿ 1.6 ಕೋಟಿ ಮಂದಿ ಚೇತರಿಸಿಕೊಂಡಿದ್ದು, 1,36,571 ಕೇಸ್​​ಗಳು ಮಾತ್ರ ಸಕ್ರಿಯವಾಗಿವೆ.

Total number of corona cases, deaths, Vaccination in India
ಭಾರತದಲ್ಲಿ ಕೊರೊನಾ ಆ್ಯಕ್ಟಿವ್​ ಕೇಸ್​ಗಳ ಸಂಖ್ಯೆ 1.36 ಲಕ್ಷಕ್ಕೆ ಇಳಿಕೆ

By

Published : Feb 13, 2021, 10:52 AM IST

ನವದೆಹಲಿ: ವಿಶ್ವದ ಅತಿದೊಡ್ಡ ಕೋವಿಡ್​ ವ್ಯಾಕ್ಸಿನೇಷನ್​ ಅಭಿಯಾನ ನಡೆಸುತ್ತಿರುವ ಭಾರತದಲ್ಲಿ ಈವರೆಗೆ ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್​ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರು ಸೇರಿ 79,67,647 ಮಂದಿಗೆ ಲಸಿಕೆ ನೀಡಲಾಗಿದೆ.

ಭಾರತದ ಕೋವಿಡ್​ ವ್ಯಾಕ್ಸಿನೇಷನ್​ ಅಭಿಯಾನ

ಕಳೆದ 24 ಗಂಟೆಗಳಲ್ಲಿ 12,143 ಸೋಂಕಿತರು ಪತ್ತೆಯಾಗಿದ್ದು, 103 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,08,92,746 ಹಾಗೂ ಮೃತರ ಸಂಖ್ಯೆ 1,55,550ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ 1,06,00,625 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಿದ್ದಾರೆ. ಉಳಿದಂತೆ 1,36,571 ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​

ಫೆಬ್ರವರಿ​ 12ರ ವರೆಗೆ 20,55,33,398 ಜನರಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದ್ದು, ನಿನ್ನೆ ಒಂದೇ ದಿನ 7,43,614 ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.

ABOUT THE AUTHOR

...view details