ನವದೆಹಲಿ: ಭಾರತದಲ್ಲಿ ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದ್ದು, ಈವರೆಗೆ ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರು ಸೇರಿ 82,85,295 ಮಂದಿಗೆ ಲಸಿಕೆ ನೀಡಲಾಗಿದೆ.
ಕಳೆದ 24 ಗಂಟೆಗಳಲ್ಲಿ 11,649 ಕೇಸ್ಗಳು ಪತ್ತೆಯಾಗಿದ್ದು, 90 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,09,16,589 ಹಾಗೂ ಮೃತರ ಸಂಖ್ಯೆ 1,55,732ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ 1,06,21,220 ಮಂದಿ ಗುಣಮುಖರಾಗಿದ್ದು, 1,39,637 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.