ಕರ್ನಾಟಕ

karnataka

ETV Bharat / bharat

ಭಾರತದಲ್ಲಿ 1.10 ಲಕ್ಷ ಸೋಂಕಿತರು.. 1.34 ಲಕ್ಷ ಕೊರೊನಾ ವಾರಿಯರ್​​ಗಳಿಗೆ ವ್ಯಾಕ್ಸಿನ್​​

ದೇಶದಲ್ಲಿ ಕೋವಿಡ್​ ವ್ಯಾಕ್ಸಿನೇಷನ್​ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದ್ದು, ಈವರೆಗೆ ಆರೋಗ್ಯ ಕಾರ್ಯಕರ್ತರು ಹಾಗೂ ವೈರಸ್​​ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರು ಸೇರಿ ಒಟ್ಟು 1,34,72,643 ಮಂದಿಗೆ ಲಸಿಕೆ ನೀಡಲಾಗಿದೆ.

Total number of corona cases, deaths, Vaccination in India
1.34 ಲಕ್ಷ ಕೊರೊನಾ ವಾರಿಯರ್​​ಗಳಿಗೆ ವ್ಯಾಕ್ಸಿನ್​​

By

Published : Feb 26, 2021, 10:04 AM IST

ನವದೆಹಲಿ: ಗುರುವಾರ 16,577 ಮಂದಿಗೆ ಮಹಾಮಾರಿ ಕೊರೊನಾ ವೈರಸ್​ ಅಂಟಿದ್ದು, 120 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇದೀಗ ದೇಶದಲ್ಲಿ ಸೋಂಕಿತರ ಸಂಖ್ಯೆ 1,10,63,491 ಹಾಗೂ ಮೃತರ ಸಂಖ್ಯೆ 1,56,825ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಪೈಕಿ 1,07,50,680 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಿದ್ದಾರೆ. ಉಳಿದಂತೆ 1,55,986 ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕೋವಿಡ್​ ವ್ಯಾಕ್ಸಿನೇಷನ್​ ಅಭಿಯಾನ ಕೂಡ ಯಶಸ್ವಿಯಾಗಿ ನಡೆಯುತ್ತಿದ್ದು, ಈವರೆಗೆ ಆರೋಗ್ಯ ಕಾರ್ಯಕರ್ತರು ಹಾಗೂ ವೈರಸ್​​ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರು ಸೇರಿ ಒಟ್ಟು 1,34,72,643 ಮಂದಿಗೆ ಲಸಿಕೆ ನೀಡಲಾಗಿದೆ.

ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​

ಫೆಬ್ರವರಿ​ 1ರ ವರೆಗೆ 11 ಕೋಟಿಗೂ ಹೆಚ್ಚು (11,07,43,103) ಜನರಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದ್ದು, ನಿನ್ನೆ ಒಂದೇ ದಿನ 8,55,800 ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.

ABOUT THE AUTHOR

...view details