ಕರ್ನಾಟಕ

karnataka

ETV Bharat / bharat

ದೇಶದಲ್ಲಿ ನಿನ್ನೆ 12,286 ಸೋಂಕಿತರು ಪತ್ತೆ.. ಈವರೆಗೆ 1.48 ಕೋಟಿ ಮಂದಿಗೆ ಲಸಿಕೆ - Covid vaccine

ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್​ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರ ಬಳಿಕ ಇದೀಗ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು ಕಾಯಿಲೆಗಳಿಂದ ಬಳಲುತ್ತಿರುವ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಲಸಿಕೆ ನೀಡಲಾಗುತ್ತಿದೆ.

Total number of corona cases, deaths, Vaccination in India
ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​

By

Published : Mar 2, 2021, 10:00 AM IST

ನವದೆಹಲಿ:ಕಳೆದ 24 ಗಂಟೆಗಳಲ್ಲಿ 12,286 ಕೋವಿಡ್​ ಸೋಂಕಿತರು ಪತ್ತೆಯಾಗಿದ್ದು, 91 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಭಾರತದಲ್ಲಿ ಪ್ರಕರಣಗಳ ಸಂಖ್ಯೆ 1,11,24,527 ಹಾಗೂ ಮೃತರ ಸಂಖ್ಯೆ 1,57,248ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಪೈಕಿ 1,07,98,921 ಮಂದಿ ಗುಣಮುಖರಾಗಿದ್ದು, 1,68,358 ಕೇಸ್​ಗಳು ಆ್ಯಕ್ಟಿವ್​ ಆಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ:ಆರೋಗ್ಯ ಸಮಸ್ಯೆಗೆ ವಾಯುಮಾಲಿನ್ಯ ಕಾರಣ! ವರದಿಯಲ್ಲಿ ಏನಿದೆ ಗೊತ್ತಾ?

ನಿನ್ನೆಯಿಂದ ದೇಶಾದ್ಯಂತ 2ನೇ ಹಂತಹ ಕೊರೊನಾ ವ್ಯಾಕ್ಸಿನೇಷನ್​ ಅಭಿಯಾನ ಆರಂಭವಾಗಿದೆ. ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್​ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರ ಬಳಿಕ ಇದೀಗ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು ಕಾಯಿಲೆಗಳಿಂದ ಬಳಲುತ್ತಿರುವ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಲಸಿಕೆ ನೀಡಲಾಗುತ್ತಿದೆ. ಜನವರಿ 16ರಿಂದ ಈವರೆಗೆ ಒಟ್ಟು 1,48,54,136 ಮಂದಿಗೆ ಲಸಿಕೆ ನೀಡಲಾಗಿದೆ.

ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​

ಮಾರ್ಚ್​​ 1ರ ವರೆಗೆ 21,76,18,057 ಜನರಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದ್ದು, ನಿನ್ನೆ ಒಂದೇ ದಿನ 7,59,283 ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.

ABOUT THE AUTHOR

...view details