ನವದೆಹಲಿ: ದೇಶಾದ್ಯಂತ 3ನೇ ಹಂತಹ ಕೊರೊನಾ ವ್ಯಾಕ್ಸಿನೇಷನ್ ಅಭಿಯಾನ ನಡೆಯುತ್ತಿದೆ. ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರ ಬಳಿಕ ಇದೀಗ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು ಕಾಯಿಲೆಗಳಿಂದ ಬಳಲುತ್ತಿರುವ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಲಸಿಕೆ ನೀಡಲಾಗುತ್ತಿದೆ. ಜನವರಿ 16ರಿಂದ ಈವರೆಗೆ ಒಟ್ಟು 1,66,16,048 ಮಂದಿಗೆ ಲಸಿಕೆ ನೀಡಲಾಗಿದೆ.
ಕಳೆದ 24 ಗಂಟೆಗಳಲ್ಲಿ 17,407 ಸೋಂಕಿತರು ಪತ್ತೆಯಾಗಿದ್ದು, 89 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 1,11,56,923 ಹಾಗೂ ಮೃತರ ಸಂಖ್ಯೆ 1,57,435ಕ್ಕೆ ಏರಿಕೆಯಾಗಿದೆ. ಆದರೆ ಮರಣ ಪ್ರಮಾಣ ಶೇ.1.41ಕ್ಕೆ ಇಳಿಕೆಯಾಗಿದೆ.