ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 18,599 ಕೋವಿಡ್ ಸೋಂಕಿತರು ಪತ್ತೆಯಾಗಿದ್ದು, 97 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಪ್ರಕರಣಗಳ ಸಂಖ್ಯೆ 1,12,29,398 ಹಾಗೂ ಮೃತರ ಸಂಖ್ಯೆ 1,57,853ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 1,08,82,798 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆ್ಯಕ್ಟಿವ್ ಕೇಸ್ಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದ್ದು, ಇದೀಗ 1,88,747 ಪ್ರಕರಣಗಳಿನ್ನೂ ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.