ನವದೆಹಲಿ: ದೇಶದಲ್ಲಿ ವ್ಯಾಕ್ಸಿನೇಷನ್ ಅಭಿಯಾನ ನಡೆಯುತ್ತಿದ್ದರೂ ಮತ್ತೆ ಕೊರೊನಾ ಅಬ್ಬರಿಸುತ್ತಿದೆ. ಕೆಲ ದಿನಗಳಿಂದ ಹೊಸ ಸೋಂಕಿತರು ಹಾಗೂ ಸಾವಿನ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದೆ.
ಶನಿವಾರ 25,320 ಕೋವಿಡ್ ಕೇಸ್ಗಳು ಹಾಗೂ 161 ಸಾವು ವರದಿಯಾಗಿವೆ. ಇದೀಗ ದೇಶದಲ್ಲಿ ಸೋಂಕಿತರ ಸಂಖ್ಯೆ 1,13,59,048 ಹಾಗೂ ಮೃತರ ಸಂಖ್ಯೆ 1,58,607 ಕ್ಕೆ ಹೆಚ್ಚಳವಾಗಿದೆ. 1,09,89,897 ಮಂದಿ ವೈರಸ್ನಿಂದ ಚೇತರಿಸಿಕೊಂಡಿದ್ದು, ಇನ್ನೂ 2,10,544 ಪ್ರಕರಣಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ:ಕ್ಯಾನ್ಸರ್ ಕೋಶಗಳು ಕೀಮೋಥೆರಪಿಗೆ ಪ್ರತಿರೋಧಿಸಬಹುದು: ಅಧ್ಯಯನ
ಮಾರ್ಚ್ 13ರ ವರೆಗೆ 22,67,03,641 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 8,64,368 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.
ಕೋವಿಡ್ ಟೆಸ್ಟಿಂಗ್ ಅಪ್ಡೇಟ್ಸ್ ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರ ಬಳಿಕ ಇದೀಗ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು ಕಾಯಿಲೆಗಳಿಂದ ಬಳಲುತ್ತಿರುವ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಜನವರಿ 16ರಿಂದ ಈವರೆಗೆ ಒಟ್ಟು 2,97,38,409 ಮಂದಿ ವ್ಯಾಕ್ಸಿನ್ ಪಡೆದಿದ್ದಾರೆ.