ನವದೆಹಲಿ: ಮತ್ತೆ ಕೋವಿಡ್ ಉಪಟಳ ಹೆಚ್ಚುತ್ತಿದ್ದು, ಕಳೆದ 24 ಗಂಟೆಗಳಲ್ಲಿ 39,726 ಕೇಸ್ಗಳು ಹಾಗೂ 154 ಸಾವು ವರದಿಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,15,14,331 ಹಾಗೂ ಮೃತರ ಸಂಖ್ಯೆ 1,59,370ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
1.15 ಕೋಟಿ ಸೋಂಕಿತರಲ್ಲಿ 1,10,83,679 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದರೂ, ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಆ್ಯಕ್ಟಿವ್ ಕೇಸ್ಗಳ ಸಂಖ್ಯೆ ಕೂಡ 2,71,282ಕ್ಕೆ ಏರಿಕೆಯಾಗಿದೆ. ಇನ್ನು ಜನವರಿ 16ರಿಂದ ಈವರೆಗೆ ಒಟ್ಟು 3,93,39,817 ಮಂದಿಗೆ ಲಸಿಕೆ ನೀಡಲಾಗಿದೆ.