ನವದೆಹಲಿ:ದಿನವೊಂದಕ್ಕೆ ದೇಶದಲ್ಲಿ ಪತ್ತೆಯಾಗುತ್ತಿದ್ದ ಕೋವಿಡ್ ಸಾವು - ನೋವಿನ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗುತ್ತಿದೆ. ಬುಧವಾರ ಒಂದೇ ದಿನ 53,476 ಕೇಸ್ಗಳು ಪತ್ತೆಯಾಗಿದ್ದರೆ, 251 ಸೋಂಕಿತರು ಮೃತಪಟ್ಟಿದ್ದಾರೆ.
ಭಾರತದಲ್ಲೀಗ ಸೋಂಕಿತರ ಸಂಖ್ಯೆ 1,17,87,534ಕ್ಕೆ, ಮೃತರ ಸಂಖ್ಯೆ 1,60,692ಕ್ಕೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 3,95,192ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ 1,12,31,650 ಜನ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಹೆಚ್ಚಿನ ಓದಿಗೆ: ಏಪ್ರಿಲ್ 1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ: ಕೇಂದ್ರ ಘೋಷಣೆ
ಜನವರಿ 16ರಿಂದ ಈವರೆಗೆ ಒಟ್ಟು 5,31,45,709 ಮಂದಿಗೆ ಲಸಿಕೆ ನೀಡಲಾಗಿದೆ. ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ಕೋವಿಡ್ ಟೆಸ್ಟಿಂಗ್ ಅಪ್ಡೇಟ್ಸ್ ಇನ್ನು ಮಾರ್ಚ್ 24ರ ವರೆಗೆ 23,75,03,882 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 10,65,021 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.