ನವದೆಹಲಿ: ಭಾರತದಲ್ಲಿ ಜನವರಿ 16ರಿಂದ ಈವರೆಗೆ ಒಟ್ಟು 1,66,16,048 ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಏಪ್ರಿಲ್ 1ರಿಂದ 45 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ಹಾಕಲಾಗುವುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ 56,211 ಹೊಸ ಕೋವಿಡ್ ಕೇಸ್ಗಳು ಹಾಗೂ 271 ಸಾವು ವರದಿಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,20,95,855 ಹಾಗೂ ಮೃತರ ಸಂಖ್ಯೆ 1,62,114ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 1,13,93,021 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆದರೆ, ಹೊಸ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ 5,40,720ಕ್ಕೆ ಹೆಚ್ಚಳವಾಗಿದೆ.
ಕೋವಿಡ್ ಟೆಸ್ಟಿಂಗ್ ಅಪ್ಡೇಟ್ಸ್
ಮಾರ್ಚ್ 29ರ ವರೆಗೆ 24 ಕೋಟಿಗೂ ಹೆಚ್ಚು (24,26,50,025) ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 7,85,864 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.