ಪಾಲಕ್ಕಾಡ್(ಕೇರಳ): ದೇವರನಾಡಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬುಧವಾರ ಮಧ್ಯರಾತ್ರಿ ವಡಕಂಚೇರಿ ಅಂಕುಮೂರ್ತಿ ಮಂಗಲದಲ್ಲಿ ಅಪಘಾತ ನಡೆದಿದ್ದು, ಎರ್ನಾಕುಲಂನ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಪ್ರವಾಸಿ ಬಸ್ಸೊಂದು ಕೆಎಸ್‌ಆರ್‌ಟಿಸಿ(ಕೇರಳ ರಸ್ತೆ ಸಾರಿಗೆ ಸಂಸ್ಥೆ) ಬಸ್‌ಗೆ ಡಿಕ್ಕಿಯಾದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದಾರೆ.
ಪ್ರವಾಸಿ ಬಸ್ 42 ವಿದ್ಯಾರ್ಥಿಗಳು ಮತ್ತು ಐವರು ಶಿಕ್ಷಕರನ್ನು ಕರೆದೊಯ್ಯುತ್ತಿತ್ತು. ಕೆಎಸ್‌ಆರ್‌ಟಿಸಿ ಬಸ್ ಕೇರಳದ ಕೊಟ್ಟಾರಕ್ಕರದಿಂದ ತಮಿಳುನಾಡಿನ ಕೊಯಮತ್ತೂರಿಗೆ ತೆರಳುತ್ತಿದ್ದು, 81 ಪ್ರಯಾಣಿಕರಿದ್ದರು. ದುರ್ಘಟನೆಯಲ್ಲಿ ಐವರು ವಿದ್ಯಾರ್ಥಿಗಳು ಸೇರಿದಂತೆ 9 ಮಂದಿ ಸಾವನ್ನಪ್ಪಿದ್ದರೆ. 40 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪಾಲಕ್ಕಾಡ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕೇರಳ ರಸ್ತೆ ಸಾರಿಗೆ ಸಚಿವ ಆಂಟನಿ ರಾಜು ತಿಳಿಸಿದ್ದಾರೆ.