ಯಾದಾದ್ರಿ(ತೆಲಂಗಾಣ):ಟ್ರ್ಯಾಕ್ಟರ್ ಚಾಲನೆ ಮಾಡ್ತಿದ್ದ ವೇಳೆ ಡ್ರೈವರ್ಗೆ ಹೃದಯಾಘಾತವಾಗಿದ್ದು ವಾಹನ ಅಪಘಾತಕ್ಕೀಡಾಗಿದೆ. ಈ ಸಂದರ್ಭದಲ್ಲಿ ಟ್ರ್ಯಾಕ್ಟರ್ನಲ್ಲಿದ್ದ ಮೂವರು ಸ್ಥಳದಲ್ಲೇ ಅಸುನೀಗಿದ್ದಾರೆ.
ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಚಾಲಕನಿಗೆ ಹೃದಯಾಘಾತವಾಗಿರುವ ಕಾರಣ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಹಳ್ಳದಲ್ಲಿ ಬಿದ್ದಿದೆ. ದುರ್ಘಟನೆಯಲ್ಲಿ ಚಾಲಕ ಸೇರಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.