ವಿಜಯನಗರ (ಆಂಧ್ರಪ್ರದೇಶ):ಆಂಧ್ರಪ್ರದೇಶರಾಜ್ಯದ ವಿಜಯನಗರ ಜಿಲ್ಲೆಯ ಕೊತ್ತವಲಸ ತಾಲೂಕಿನ ಕಂಟಕಪಲ್ಲಿಯಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಕ್ರಾಸಿಂಗ್ ಸಂದರ್ಭದಲ್ಲಿ ಎರಡು ಪ್ಯಾಸೆಂಜರ್ ರೈಲುಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ. ಪರಿಣಾಮ 6 ಜನರು ಸಾವನ್ನಪ್ಪಿದ್ದು, 40 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ರೈಲು ಅಪಘಾತದ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹೌದು, ವಿಜಯನಗರ ಜಿಲ್ಲೆಯಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ರಾಯಗಡ ಪ್ಯಾಸೆಂಜರ್ ರೈಲಿನ 3 ಬೋಗಿಗಳು ಹಳಿ ತಪ್ಪಿವೆ. ಇನ್ನು ವಿದ್ಯುತ್ ತಂತಿಗಳು ತುಂಡಾಗಿ ಬಿದ್ದು ಘಟನಾ ಸ್ಥಳದಲ್ಲಿ ಕತ್ತಲು ಆವರಿಸಿದೆ. ಸ್ಥಳಕ್ಕೆ ರೈಲ್ವೆ ರಕ್ಷಣಾ ಸಿಬ್ಬಂದಿ ಹಾಗೂ ಪೊಲೀಸರು ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಈ ಭೀಕರ ರೈಲು ಅಪಘಾತದಲ್ಲಿ ಆರು ಜನ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಶಾಖ ಮತ್ತು ವಿಜಯನಗರಂ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.
ಅಪಘಾತದ ಬಳಿಕ ಆ್ಯಂಬುಲೆನ್ಸ್ಗಳು ಸ್ಥಳಕ್ಕೆ ತಲುಪಲು ಸಾಧ್ಯವಾಗದ ಕಾರಣ ತುರ್ತು ಸೇವೆಗಳಿಗೆ ಸಮಸ್ಯೆಯಾಗಿತ್ತು. ಬಳಿಕ ಗಾಯಾಳುಗಳನ್ನು ಚಿಕಿತ್ಸೆಗೆ ಸ್ಥಳಾಂತರಿಸುವ ಸಲುವಾಗಿ 1 ಕಿ.ಮೀಟರ್ ಹೊತ್ತೊಯ್ದ ಘಟನೆಯೂ ಕಂಡುಬಂತು. ಡಿಕ್ಕಿ ರಭಸಕ್ಕೆ ರೈಲಿನ ಬೋಗಿಗಳು ಒಂದರ ಮೇಲೊಂದರಂತೆ ಬಿದ್ದಿದ್ದಾವೆ. ಘಟನೆ ಕುರಿತು ಬದುಕುಳಿದಿರುವರು ಈ ಕಹಿ ಘಟನೆಯ ಅನುಭವ ಹಂಚಿಕೊಂಡಿದ್ದು, ಅಪಘಾತವನ್ನು ನೆನೆಸಿಕೊಂಡರೆ ಮೈ ನಡುಗುತ್ತದೆ ಎಂದಿದ್ದಾರೆ.
ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ:ವಿಜಯನಗರ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದ ಬಗ್ಗೆ ಸಿಎಂ ಜಗನ್ ಮೋಹನ್ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಹಾಗೆ ಗಂಭೀರವಾಗಿ ಗಾಯಗೊಂಡವರಿಗೆ ರೂ.2 ಲಕ್ಷ ಪರಿಹಾರ, ಇತರೆ ರಾಜ್ಯಗಳ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ್ದಾರೆ. ಬೇರೆ ರಾಜ್ಯಗಳ ಗಾಯಾಳುಗಳಿಗೆ ರೂ.50 ಸಾವಿರ ಪರಿಹಾರ ನೀಡುವುದಾಗಿ ಹೇಳಿದ್ದಾರೆ. ಜತೆಗೆ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರೈಲು ಅಪಘಾತದಲ್ಲಿ ತಮ್ಮ ಸಂಬಂಧಿಕರ ಬಗ್ಗೆ ತಿಳಿಯಲು ಸರ್ಕಾರ ಮತ್ತು ರೈಲ್ವೇ ಇಲಾಖೆ ಸಹಾಯವಾಣಿ ಕೇಂದ್ರಗಳನ್ನು ತೆರೆದಿದೆ. ಹೆಚ್ಚಿನ ವಿವರಕ್ಕಾಗಿ ಈ ಕೆಳಗಿನ ಸಂಖ್ಯೆಗಳಿಗೆ ಕರೆ ಮಾಡಿ ತಮ್ಮ ಸಂಬಂಧಿಕರ ಬಗ್ಗೆ ತಿಳಿಯಬಹುದಾಗಿದೆ.