ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಕೇಂದ್ರ ಗೃಹ ಸಚಿವಾಲಯವು ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಅನ್ನು ಉಗ್ರಗಾಮಿ ಸಂಘಟನೆ ಎಂದು ಗುರುವಾರ ಘೋಷಿಸಿದೆ. ಇದು ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಉಗ್ರ ಸಂಘಟನೆಯ ಒಂದು ಶಾಖೆಯಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೇಳಿದ್ದಾರೆ. ಗೃಹ ಇಲಾಖೆ ಹೊರಡಿಸಿರುವ ಆದೇಶದಲ್ಲಿ 'ಟಿಆರ್‌ಎಫ್ ಸಂಘಟನೆಯು ಆನ್‌ಲೈನ್ ಮಾಧ್ಯಮದ ಮೂಲಕ ಯುವಕರ ದಾರಿ ತಪ್ಪಿಸುತ್ತಿದೆ. ಭಯೋತ್ಪಾದಕ ಚಟುವಟಿಕೆಗಳ ಕುರಿತು ಪ್ರಚಾರದಲ್ಲಿ ತೊಡಗಿಸಿಕೊಂಡಿದೆ. ಭಯೋತ್ಪಾದಕರ ನೇಮಕಾತಿ, ಉಗ್ರರ ಒಳನುಸುಳುವಿಕೆ, ಪಾಕಿಸ್ತಾನದಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಶಸ್ತ್ರಾಸ್ತ್ರಗಳು ಮತ್ತು ಮಾದಕವಸ್ತುಗಳ ಕಳ್ಳಸಾಗಣೆಗಾಗಿ ಆನ್‌ಲೈನ್ ಮಾಧ್ಯಮದ ಮೂಲಕ ಯುವಕರನ್ನು ನೇಮಿಸಿಕೊಳ್ಳುತ್ತಿದೆ' ಎಂದು ಹೇಳಿದೆ.
ಟಿಆರ್‌ಎಫ್ ಕಮಾಂಡರ್ ಶೇಖ್ ಸಜ್ಜದ್ ಗುಲ್:ಕಾಶ್ಮೀರ ಪಂಡಿತರ ಹತ್ಯೆಗೆ ಟಿ.ಆರ್.ಎಫ್. ಉಗ್ರ ಸಂಘಟನೆ ಬೆದರಿಕೆ ಹಾಕಿತ್ತು. ಜಮ್ಮು ಮತ್ತು ಕಾಶ್ಮೀರದ ಜನರನ್ನು ದೇಶದ ವಿರುದ್ಧ ಭಯೋತ್ಪಾದಕ ಚಟುವಟಿಕೆಗಳಿಗೆ ಎಟ್ಟಿಕಟ್ಟುವ ಕೆಲಸ ಮಾಡಲಾಗುತ್ತಿದೆ. ಹೀಗಾಗಿ, 1967ರ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ ಅಡಿ ಈ ಆದೇಶ ಹೊರಡಿಸಲಾಗಿದೆ. ಶೇಖ್ ಸಜ್ಜದ್ ಗುಲ್ ಡಿ ರೆಸಿಸ್ಟೆನ್ಸ್ ಫ್ರಂಟ್ನ ಕಮಾಂಡರ್ ಆಗಿದ್ದಾನೆ ಎಂದು 1967ರ ಕಾಯ್ದೆಯ ನಾಲ್ಕನೇ ಷೆಡ್ಯೂಲ್ ಪ್ರಕಾರ ಗೃಹ ಸಚಿವಾಲಯ ಘೋಷಿಸಿದೆ.