ಕರ್ನಾಟಕ

karnataka

ETV Bharat / bharat

ಬಿಜೆಪಿ ಕಾರ್ಯಕರ್ತನ ಮೇಲೆ ಟಿಎಂಸಿ ಕಾರ್ಯಕರ್ತರಿಂದ ಮೂತ್ರ ವಿಸರ್ಜನೆ ಆರೋಪ - ಸ್ಥಳೀಯ ಬಿಜೆಪಿ ಕಾರ್ಯಕರ್ತ

ಬಂಗಾಳದಲ್ಲಿ ಗಾಯಗೊಂಡ ಬಿಜೆಪಿ ಕಾರ್ಯಕರ್ತನ ಮೇಲೆ ತೃಣಮೂಲ ಕಾರ್ಯಕರ್ತರು ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Trinamool activists allegedly urinate  urinate on injured BJP worker in Bengal  activists allegedly urinate on injured BJP worker  ತೃಣಮೂಲ ಕಾರ್ಯಕರ್ತರು ಮೂತ್ರ ವಿಸರ್ಜನೆ  ಬಿಜೆಪಿ ಕಾರ್ಯಕರ್ತನ ಮೇಲೆ ತೃಣಮೂಲ ಕಾರ್ಯಕರ್ತ  ಮೂತ್ರ ವಿಸರ್ಜನೆಯ ಘಟನೆ ಪುನರಾವರ್ತನೆ  ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು  ಸ್ಥಳೀಯ ಬಿಜೆಪಿ ಕಾರ್ಯಕರ್ತ  ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತ
ಬಿಜೆಪಿ ಕಾರ್ಯಕರ್ತನ ಮೇಲೆ ಟಿಎಂಸಿ ಕಾರ್ಯಕರ್ತರಿಂದ ಮೂತ್ರ ವಿಸರ್ಜನೆ ಆರೋಪ

By

Published : Jul 15, 2023, 7:36 PM IST

ಮಿಡ್ನಾಪುರ, ಪಶ್ಚಿಮ ಬಂಗಾಳ: ಜಿಲ್ಲೆಯಲ್ಲಿ ಮೂತ್ರ ವಿಸರ್ಜನೆಯ ಘಟನೆ ಪುನರಾವರ್ತನೆಯಾಗಿದೆ. ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಸ್ಥಳೀಯ ಬಿಜೆಪಿ ಕಾರ್ಯಕರ್ತನನ್ನು ಅಪಹರಿಸಿ, ಆತನ ಮೇಲೆ ಹಲ್ಲೆ ನಡೆಸಿ, ಅವರ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿವೆ.

ಈ ಘಟನೆ ಗುರುವಾರ ರಾತ್ರಿ ನಡೆದಿದೆ. ಇತ್ತೀಚೆಗೆ ಮುಕ್ತಾಯಗೊಂಡ ಪಂಚಾಯತ್ ಚುನಾವಣೆಯ ಪೋಲಿಂಗ್ ಏಜೆಂಟ್ ಆಗಿದ್ದ ಬಿಜೆಪಿ ಕಾರ್ಯಕರ್ತನನ್ನು ಆಡಳಿತ ಪಕ್ಷದ ಕಾರ್ಯಕರ್ತರು ಅಪಹರಿಸಿ ಗಾರ್ಬೆಟಾದ ಸ್ಥಳೀಯ ಪಕ್ಷದ ಕಚೇರಿಗೆ ಕರೆದೊಯ್ದರು ಎಂಬ ಆರೋಪ ಕೇಳಿ ಬಂದಿದೆ. ಬಳಿಕ ಅಲ್ಲಿ ಬಿಜೆಪಿ ಕಾರ್ಯಕರ್ತನಿಗೆ ಚಿತ್ರಹಿಂಸೆ ನೀಡಿ ಅವಮಾನಿಸಲಾಗಿದೆಯಂತೆ. ಬಳಿಕ ಆತನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿ ದೌರ್ಜನ್ಯ ಮೆರೆದಿದ್ದಾರೆ ಎಂಬ ಆರೋಪ ಮಾಡಲಾಗುತ್ತಿದೆ.

ಇನ್ನು ಅವಮಾನ ಮತ್ತು ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತನನ್ನು ಶುಕ್ರವಾರ ತಡರಾತ್ರಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪಕ್ಷದ ಉಪಾಧ್ಯಕ್ಷ ಸಮಿತ್ ದಾಸ್ ನೇತೃತ್ವದ ಬಿಜೆಪಿ ನಿಯೋಗ ಇಂದು ಬೆಳಗ್ಗೆ ಆಸ್ಪತ್ರೆಗೆ ತೆರಳಿ ಸಂತ್ರಸ್ತರನ್ನು ಭೇಟಿಯಾಗಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತ ತಾನು ಅನುಭವಿಸಿದ ಅವಮಾನ ಮತ್ತು ಹಿಂಸೆಯನ್ನು ತಮ್ಮ ಉಪಾಧ್ಯಕ್ಷರಿಗೆ ವಿವರಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಬಿಜೆಪಿ ಉಪಾಧ್ಯಕ್ಷ ಸಮಿತ್​ ದಾಸ್​, ತೃಣಮೂಲ ಕಾಂಗ್ರೆಸ್‌ನ ಗೂಂಡಾಗಳು ತಮ್ಮ ವಿಜಯೋತ್ಸವವನ್ನು ಆಚರಿಸಲು ನಮ್ಮ ಪಕ್ಷದ ಕಾರ್ಯಕರ್ತರಿಗೆ ಹಣದ ಬೇಡಿಕೆ ಇಟ್ಟಿದ್ದಾರೆ. ತೀರಾ ಬಡವರಾಗಿದ್ದ ನಮ್ಮ ಕಾರ್ಯಕರ್ತ ಹಣ ಕೊಡಲು ನಿರಾಕರಿಸಿದ್ದಾರೆ. ಇದು ಅವರನ್ನು ಕೆರಳಿಸಿದೆ. ನಂತರ ತೃಣಮೂಲ ಕಾರ್ಯಕರ್ತರು ನಮ್ಮ ಕಾರ್ಯಕರ್ತನನ್ನು ಅಪಹರಿಸಿ ಸ್ಥಳೀಯ ಪಕ್ಷದ ಕಚೇರಿಗೆ ಕರೆದೊಯ್ದಿದ್ದಾರೆ. ಮೊದಲಿಗೆ ಆತನನ್ನು ತೀವ್ರವಾಗಿ ಥಳಿಸಿದ್ದಾರೆ. ನೀರು ಕೇಳಿದಾಗ ಅಮಲೇರಿದ ದುಷ್ಕರ್ಮಿಗಳು ಆತನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಈ ಸಂಬಂಧ ಈಗಾಗಲೇ ಪೊಲೀಸರಿಗೆ ದೂರು ನೀಡಿದ್ದೇವೆ. ನಾವು ಈ ವಿಷಯದ ಬಗ್ಗೆ ದೊಡ್ಡ ಹೋರಾಟವೇ ಕೈಗೊಳ್ಳುತ್ತೇವೆ ಎಂದು ದಾಸ್ ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ಶಾಸಕ ಮತ್ತು ಪಶ್ಚಿಮ ಮಿಡ್ನಾಪುರದ ಪಕ್ಷದ ಜಿಲ್ಲಾ ಸಂಯೋಜಕ ಅಜಿತ್ ಮೈತಿ ಅವರು ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಗರ್ಬೆಟಾ ಪ್ರದೇಶದಲ್ಲಿ ಚುನಾವಣೆಗಳು ಸಂಪೂರ್ಣವಾಗಿ ಶಾಂತಿಯುತವಾಗಿವೆ. ಯಾವುದೇ ರೀತಿಯ ಉದ್ವಿಗ್ನತೆಯನ್ನು ತಪ್ಪಿಸಲು ನಾವು ವಿಜಯೋತ್ಸವವನ್ನು ಸೀಮಿತ ಮತ್ತು ವಿನಮ್ರ ರೀತಿಯಲ್ಲಿ ಆಯೋಜಿಸಿದ್ದೇವೆ. ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಸೃಷ್ಟಿಸಲು ಬಿಜೆಪಿ ಈಗ ಕಥೆಗಳನ್ನು ಕಟ್ಟುತ್ತಿದೆ ಎಂದು ಮೈತಿ ಹೇಳಿದರು.

ಓದಿ:ಮೂತ್ರ ವಿಸರ್ಜನೆ ಪ್ರಕರಣ: ಸಂತ್ರಸ್ತ​ ವ್ಯಕ್ತಿಯ ಪಾದ ತೊಳೆದು, ಕ್ಷಮೆ ಕೇಳಿದ ಮಧ್ಯಪ್ರದೇಶ ಸಿಎಂ: ವಿಡಿಯೋ

ಉತ್ತರಪ್ರದೇಶದಲ್ಲಿ ಮೂತ್ರ ವಿಸರ್ಜನೆ ವಿಡಿಯೋ ವೈರಲ್​:ಮಧ್ಯಪ್ರದೇಶದ ಮೂತ್ರ ವಿಸರ್ಜನೆ ವಿವಾದ ಇತ್ಯರ್ಥವಾಗುವ ಮುನ್ನವೇ ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯಲ್ಲಿ ಇಂತಹದ್ದೇ ಮತ್ತೊಂದು ಘಟನೆ ಉತ್ತರ ಪ್ರದೇಶದಿಂದ ಇತ್ತೀಚೆಗಷ್ಟೇ ವರದಿಯಾಗಿತ್ತು. ಜುಲೈ 11 ರಂದು ಈ ಘಟನೆ ನಡೆದಿತ್ತು. ಆದರೆ, ಘಟನೆಯ ವಿಡಿಯೋ ವೈರಲ್ ಆದ ನಂತರ ಪೊಲೀಸರಿಗೆ ದೂರು ನೀಡಲಾಗಿತ್ತು. ಮದ್ಯದ ಅಮಲಿನಲ್ಲಿ ದೂರುದಾರರಿಗೆ ಘಟನೆಯ ಬಗ್ಗೆ ತಿಳಿದಿರಲಿಲ್ಲ. ಮರುದಿನ ಬೆಳಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್ ಆದ ಮೇಲೆ, ಅದನ್ನು ನೋಡಿ ನಡೆದ ಘಟನೆಯ ಅರಿವಾಗಿದೆ. ನಂತರ ಸಂತ್ರಸ್ತ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದ.

ABOUT THE AUTHOR

...view details