ಕೋಲ್ಕತ್ತಾ(ಪಶ್ಚಿಮ ಬಂಗಾಳ):ಕಳೆದ ವರ್ಷ ಪಶ್ಚಿಮ ಬಂಗಾಳದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ತೃಣಮೂಲ ಕಾಂಗ್ರೆಸ್(ಟಿಎಂಸಿ), ಇದೀಗ ಸ್ಥಳೀಯ ಸಂಸ್ಥೆ ಎಲೆಕ್ಷನ್ನಲ್ಲೂ ಅಭೂತಪೂರ್ವ ಸಾಧನೆ ತೋರಿದೆ.
ಕಳೆದ ತಿಂಗಳ ಫೆ. 28ರಂದು 108 ಪುರಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಇಂದು ಫಲಿತಾಂಶ ಬಹಿರಂಗಗೊಳ್ಳುತ್ತಿದೆ. ಟಿಎಂಸಿ 103 ಪುರಸಭೆಗಳಲ್ಲಿ ಪ್ರಚಂಡ ಜಯಭೇರಿ ಪಡೆದಿದ್ದು, ಉಳಿದ ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಎರಡು ಪುರಸಭೆಗಳಲ್ಲಿ ಇತರೆ ಪಕ್ಷಗಳು ವಿಜಯ ಸಾಧಿಸಿವೆ. ಪಶ್ಚಿಮ ಬಂಗಾಳದಲ್ಲಿ ವಿರೋಧ ಪಕ್ಷದಲ್ಲಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಖಾತೆ ತೆರೆಯುವಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ.