ಕೋಲ್ಕತ್ತಾ(ಪಶ್ಚಿಮ ಬಂಗಾಳ):ಆಡಳಿತರೂಢ ತೃಣಮೂಲ ಕಾಂಗ್ರೆಸ್ನ 38 ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆಂದು ಮಿಥುನ್ ಚಕ್ರವರ್ತಿ ಬಾಂಬ್ ಸಿಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿರುವ ಅವರು, ಟಿಎಂಸಿಯ 38 ಶಾಸಕರ ಪೈಕಿ 21 ಎಂಎಲ್ಎಗಳು ನೇರವಾಗಿ ನಮ್ಮೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದಾರೆ ಎಂದು ತಿಳಿಸಿದರು.
ಕೋಲ್ಕತ್ತಾದಲ್ಲಿ ಆಯೋಜನೆಗೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿರುವ ಅವರು, ನೀವು ಈ ಕ್ಷಣದಲ್ಲಿ ಬ್ರೇಕಿಂಗ್ ನ್ಯೂಸ್ ಕೇಳಲು ಬಯಸುವಿರಾ? 38 ಟಿಎಂಸಿ ಶಾಸಕರು ನಮ್ಮೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ, ಅವರಲ್ಲಿ 21 ಮಂದಿ ನೇರ ಸಂಪರ್ಕದಲ್ಲಿದ್ದಾರೆ ಎಂದರು. ಈ ಮೂಲಕ ಪಶ್ಚಿಮ ಬಂಗಾಳದಲ್ಲೂ ಆಪರೇಷನ್ ಕಮಲದ ಸುಳಿವು ನೀಡಿದ್ದಾರೆ.