ಅಗರ್ತಲಾ(ತ್ರಿಪುರಾ) :2018ರಲ್ಲಿ ತ್ರಿಪುರಾದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದ ಬಿಪ್ಲಬ್ ಕುಮಾರ್ ದೇವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯದ ವಿಧಾನಸಭೆ ಚುನಾವಣೆ ನಡೆಯಲು ಕೇವಲ ಒಂದು ವರ್ಷ ಬಾಕಿ ಇರುವಾಗಲೇ ಈ ಬೆಳವಣಿಗೆ ನಡೆದಿದೆ.
ತಮ್ಮ ರಾಜೀನಾಮೆ ಪತ್ರವನ್ನ ರಾಜ್ಯಪಾಲರಿಗೆ ರವಾನೆ ಮಾಡಿದ್ದಾರೆಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ. ಹೈಕಮಾಂಡ್ ಸೂಚನೆಯಂತೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿರುವುದಾಗಿ ತಿಳಿದು ಬಂದಿದೆ. ಮೊನ್ನೆಯಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನ ಭೇಟಿ ಮಾಡಿದ್ದ ಬಿಪ್ಲಬ್ ಕುಮಾರ್ ಇದೀಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.