ಅಗರ್ತಲಾ:ತ್ರಿಪುರ ಸಿಎಂ ಬಿಪ್ಲಬ್ ಕುಮಾರ್ ದೇವ್ಗೆ ಕೊರೊನಾ ಸೋಂಕು ದೃಢಪಟ್ಟಿದೆ.
ತ್ರಿಪುರ ಸಿಎಂಗೆ ಕೊರೊನಾ ಪಾಸಿಟಿವ್ - Tripura CHief Minister Biplab Kumar Deb has tested Covid positiv
ಕೊರೊನಾ ಪರಿಕ್ಷೇಯಲ್ಲಿ ನನಗೆ ಪಾಸಿಟಿವ್ ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಕ್ವಾರಂಟೈನ್ಗೆ ಒಳಗಾಗಿದ್ದೇನೆ ಎಂದು ತ್ರಿಪುರ ಸಿಎಂ ಬಿಪ್ಲಬ್ ಕುಮಾರ್ ದೇವ್ ಟ್ವೀಟ್ ಮಾಡಿದ್ದಾರೆ.
ತಮಗೆ ಕೋವಿಡ್ ದೃಢಪಟ್ಟಿರುವ ಬಗ್ಗೆ ಟ್ವೀಟ್ ಮಾಡಿರುವ ಬಿಪ್ಲಬ್ ಕುಮಾರ್ ದೇವ್, ಕೊರೊನಾ ಪರಿಕ್ಷೇಯಲ್ಲಿ ನನಗೆ ಪಾಸಿಟಿವ್ ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಕ್ವಾರಂಟೈನ್ಗೆ ಒಳಗಾಗಿದ್ದೇನೆ. ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದ ಅಗತ್ಯ ಕ್ರಮಗಳನ್ನು ಅನುಸರಿಸಿ ಮತ್ತು ಸುರಕ್ಷಿತವಾಗಿರುವಂತೆ ಎಲ್ಲರಿಗೂ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ತ್ರಿಪುರದಲ್ಲಿ ಡಿಸೆಂಬರ್ನಿಂದ ಫೆಬ್ರವರಿ ನಡುವೆ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ ಕಂಡಿತ್ತು. ಆದರೆ ಮಾರ್ಚ್‌ನಿಂದ ಕೊರೊನಾ ಉಲ್ಬಣಗೊಳ್ಳುತ್ತಿದೆ. ಸರ್ಕಾರದ ದಾಖಲೆಗಳ ಪ್ರಕಾರ ತ್ರಿಪುರದಲ್ಲಿ ಕಳೆದ ವರ್ಷದಿಂದ ಇಲ್ಲಿಯವರೆಗೆ 388 ಜನರು ಸಾವನ್ನಪ್ಪಿದ್ದಾರೆ.