ಅಗರ್ತಲಾ: ತ್ರಿಪುರಾದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ರಾಜ್ಯದಲ್ಲಿ ರಾತ್ರಿ 9 ರಿಂದ ಬೆಳಗ್ಗೆ 5 ರವರೆಗೆ 10 ದಿನಗಳವರೆಗೆ ಸರ್ಕಾರ ರಾತ್ರಿ ಕರ್ಫ್ಯೂ ವಿಧಿಸಿದೆ. ನಾಳೆಯಿಂದ ಈ ನಿಯಮ ಜಾರಿಯಾಗಲಿದೆ ಮತ್ತು ಈ ತಿಂಗಳ 20 ರಂದು ಮುಕ್ತಾಯವಾಗಲಿದೆ.
ರಾಜ್ಯದ ಮುಖ್ಯ ಕಾರ್ಯದರ್ಶಿ ಕುಮಾರ್ ಅಲೋಕ್ ಆದೇಶ ಹೊರಡಿಸಿದ್ದಾರೆ. ರಾಜ್ಯ ಸರ್ಕಾರವು ಪರಿಸ್ಥಿತಿಯನ್ನು ವಿವರವಾಗಿ ಪರಿಶೀಲಿಸಿದೆ ಮತ್ತು ರಾಜ್ಯದಲ್ಲಿ ಕೊರೊನಾ ನಿರ್ಬಂಧಗಳನ್ನು ಮಾರ್ಪಡಿಸುವುದು ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.