ಸಿಧಿ (ಮಧ್ಯಪ್ರದೇಶ) : ಸಿಧಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅತಿವೇಗವಾಗಿ ಬಂದ ಟ್ರಕ್ವೊಂದು ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದಿದ್ದು ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ 10:30ರ ಸುಮಾರಿಗೆ ಸಿಟಿ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಾಹಿತಿ ಪ್ರಕಾರ, ಬೊಲೆರೋ ಸವಾರ ಸಿಧಿ ಮಾರ್ಗವಾಗಿ ಹೋಗುತ್ತಿದ್ದ. ಈ ವೇಳೆ ವೇಗವಾಗಿ ಬಂದ ಟ್ರಕ್, ಬೊಲೆರೋ ವಾಹನಕ್ಕೆ ಗುದ್ದಿದೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಜೊತೆಗೆ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಟ್ರಕ್ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ನಾಲ್ವರು ಯುವಕರು ದಾರುಣ ಸಾವು : ಉತ್ತರ ಪ್ರದೇಶದ ಮಿರ್ಜಾಪುರದ ಸಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗೋಹಿಯಾ ಲಾಲ್‌ಗಂಜ್ ಕಲ್ವಾರಿ ಮಾರ್ಗದಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಾಲ್ವರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಹಿಂದಿನಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ನಡೆದಿದೆ.
ಇದನ್ನೂ ಓದಿ :ಸೈಕಲ್ ಮೇಲೆ ತೆರಳುತ್ತಿದ್ದ 7 ವಿದ್ಯಾರ್ಥಿನಿಯರಿಗೆ ಗುದ್ದಿಕೊಂಡು ಹೋದ ಬೊಲೆರೋ - Video
ಅವಘಡ ಸಂಭವಿಸಿದ ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮೃತರಲ್ಲಿ ಮೂವರು ಯುವಕರು ಒಂದೇ ಗ್ರಾಮದವರಾಗಿದ್ದು, ಓರ್ವ ಬೇರೆ ಗ್ರಾಮದವನಾಗಿದ್ದಾನೆ. ಮದುವೆ ಸಮಾರಂಭ ಮುಗಿಸಿ ವಾಪಸ್ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಪೊಲೀಸರು ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಇದನ್ನೂ ಓದಿ :ವಿದ್ಯುತ್ ಅವಘಡ : ಮಡ್ನಾಳ ಕ್ಯಾಂಪಿನ 8 ಗುಡಿಸಲುಗಳು ಭಸ್ಮ, ಸಚಿವರಿಂದ ಪರಿಹಾರ
"ಸಂತ ನಗರ ಠಾಣೆ ವ್ಯಾಪ್ತಿಯಲ್ಲಿ ನಾಲ್ವರು ಯುವಕರು ಬೈಕ್‌ನಲ್ಲಿ ಮದುವೆ ಸಮಾರಂಭಕ್ಕೆ ತೆರಳಿದ್ದರು. ಮುದುವೆ ಮುಗಿಸಿ ಹಿಂತಿರುಗುತ್ತಿದ್ದಾಗ ನಿಂತಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಗಾಯಗೊಂಡ ನಾಲ್ವರು ಯುವಕರನ್ನು ಪತೇರಾ ಪಿಎಚ್‌ಸಿಗೆ ದಾಖಲಿಸಿಸಲಾಯಿತು. ಚಿಕಿತ್ಸೆ ವೇಳೆ ನಾಲ್ವರೂ ಸಾವನ್ನಪ್ಪಿದ್ದಾರೆ" ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ :ಚಿತ್ರದುರ್ಗದ ಬಳಿ ನಿಂತ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ.. ತಮಿಳುನಾಡು ಮೂಲದ ಮೂವರು ಸಾವು!
ಮೂವರು ಸಾವು :ಇನ್ನೊಂದೆಡೆ, ಚಿತ್ರದುರ್ಗ ಜಿಲ್ಲೆಯಲ್ಲಿ ಸಹ ಭೀಕರ ರಸ್ತೆ ಅಪಘಾತ ನಡೆದಿದೆ. ಇಲ್ಲಿನ ಪುಣೆ -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದಿದ್ದು, ಆ್ಯಂಬುಲೆನ್ಸ್ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.