ನವದೆಹಲಿ:ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಸರ್ಕಾರ ಮಾತುಕತೆಗೆ ಮುಂದಾಗಿರುವುದು ಪ್ರಜಾಪ್ರಭುತ್ವಕ್ಕೆ ಸೂಕ್ತವಾದುದು ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಹೇಳಿದ್ದಾರೆ ಅಂತಾ ಶುಕ್ರವಾರ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಶುಕ್ರವಾರ ವರ್ಚುವಲ್ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಂಇಎ ವಕ್ತಾರ ಅನುರಾಗ್ ಶ್ರೀವಾಸ್ತವ, "ಕೆನಡಾದಲ್ಲಿ ಭಾರತೀಯ ರಾಜತಾಂತ್ರಿಕ ಸಿಬ್ಬಂದಿಯನ್ನು ರಕ್ಷಿಸುವುದು ಟ್ರೂಡೊ ತಮ್ಮ ಸರ್ಕಾರದ ಜವಾಬ್ದಾರಿ ಎಂಬುದನ್ನು ಒಪ್ಪಿಕೊಂಡಿದ್ದಾರೆ" ಎಂದು ಅವರು ಹೇಳಿದರು.
ಓದಿ: 'ದೇಶ್ ನಹಿ ಬಿಕ್ನೆ ದೂಂಗಾ' ಎನ್ನುತ್ತಿರುವ ಮೋದಿ ಗೆಳೆಯರಿಗೆ ದೇಶ ಮಾರಲು ಹೊರಟಿದ್ದಾರೆ: ಕನ್ಹಯ್ಯ
ಪ್ರಧಾನಿ ಮೋದಿ ಮತ್ತು ಕೆನಡಾ ಪ್ರಧಾನಿ ಬುಧವಾರ (ಫೆಬ್ರವರಿ 11) ದೂರವಾಣಿ ಸಂಭಾಷಣೆ ನಡೆಸಿದ ನಂತರ ಶ್ರೀವಾಸ್ತವ ಅವರ ಈ ಅಭಿಪ್ರಾಯ ವ್ಯಕ್ತವಾಗಿದೆ. ಈ ಸಂಭಾಷಣೆಯಲ್ಲಿ ಪ್ರಧಾನಿ ಮೋದಿ ಕೆನಡಾಕ್ಕೆ ಭಾರತದಿಂದ ಕೋವಿಡ್-19 ಲಸಿಕೆಯನ್ನು ನೀಡುವುದಾಗಿ ಒಪ್ಪಿಕೊಂಡಿದ್ದಾರೆ.
ಅಲ್ಲದೆ ಈ ಸಂಭಾಷಣೆಯ ಸಮಯದಲ್ಲಿ ರೈತರ ಪ್ರತಿಭಟನೆಯ ವಿಷಯವೂ ಬಂದಿತು. ಈಗಾಗಲೇ ಇತರ ಹಲವು ದೇಶಗಳಿಗೆ ವ್ಯಾಕ್ಸಿನೇಷನ್ ನೀಡಿ ಸಹಾಯ ಮಾಡಿದಂತೆಯೇ, ಕೆನಾಡಕ್ಕೂ ಕೈಲಾದಷ್ಟು ಸಹಾಯ ಮಾಡುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ ಎಂದರು.