ನವದೆಹಲಿ:ದೇಶಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನ ಯಶಸ್ವಿಯಾಗಿ ಸಾಗುತ್ತಿದ್ದು, ಟಿವಿಎಸ್ ಮೋಟಾರ್ ಕಂಪನಿಯು ತನ್ನ ಉದ್ಯೋಗಿಗಳ ಹಾಗೂ ಅವರ ಕುಟುಂಬಸ್ಥರ ಲಸಿಕೆಯ ವೆಚ್ಚ ಭರಿಸುವುದಾಗಿ ತಿಳಿಸಿದೆ.
ಸರ್ಕಾರದ ಮಾರ್ಗಸೂಚಿಗಳಿಗೆ ಅನುಗುಣವಾಗಿ ದೇಶಾದ್ಯಂತ 35,000 ಕಂಪನಿ ಉದ್ಯೋಗಿಗಳಿಗೆ ಪ್ರಸ್ತುತ ನಡೆಯುತ್ತಿರುವ ಲಸಿಕಾಭಿಯಾನದಲ್ಲಿ ವ್ಯಾಕ್ಸಿನ್ ನೀಡಲಾಗುವುದು. ನಮ್ಮ ಕಂಪನಿಯ ಎಲ್ಲಾ ಉದ್ಯೋಗಿಗಳು ಮತ್ತು ಅವರ ಕುಟುಂಬಗಳ ಆರೋಗ್ಯ ಮತ್ತು ಸುರಕ್ಷತೆಗೆ ಆದ್ಯತೆ ನೀಡುವ ಪ್ರಯತ್ನವನ್ನು ನಾವು ಮುಂದುವರೆಸಿದ್ದು, ಅವರಿಗೆ ಉಚಿತವಾಗಿ ಕೋವಿಡ್ ಲಸಿಕೆ ಸಿಗುವಂತೆ ಮಾಡಲು ನಿರ್ಧರಿಸಿದ್ದೇವೆ ಎಂದು ಟಿವಿಎಸ್ ಕಂಪನಿಯ ಮಾನವ ಸಂಪನ್ಮೂಲ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಆರ್. ಆನಂದ್ ಕೃಷ್ಣನ್ ಹೇಳಿದ್ದಾರೆ.