ಪಂಚಕುಲ: ಹರಿಯಾಣ ಸೇರಿದಂತೆ ದೇಶದ 9 ರಾಜ್ಯಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಹಕ್ಕಿ ಜ್ವರ ಅಂಟುವ ಭೀತಿಯಲ್ಲಿ ಹರಿಯಾಣದ ಪಂಚಕುಲದಲ್ಲಿ 20 ಸಾವಿರ ಕೋಳಿಗಳನ್ನು ಕೊಲ್ಲಲಾಗಿದೆ.
ಭಾರತ ಸರ್ಕಾರ ಮತ್ತು ಪಶುಸಂಗೋಪನಾ ಇಲಾಖೆ ಸೂಚನೆಯಂತೆ ಎಲ್ಲ ಜಿಲ್ಲೆಗಳಲ್ಲಿ ಹಕ್ಕಿ ಜ್ವರಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪಂಚಕುಲದಲ್ಲಿ ಈಗಾಗಲೇ ಸಾವಿರಾರು ಕೋಳಿಗಳು ಹಕ್ಕಿ ಜ್ವರಕ್ಕೆ ಬಲಿಯಾಗಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ಪ್ರದೇಶದ ಸುತ್ತಲಿನ 1 ಕಿ.ಮೀ ವ್ಯಾಪ್ತಿಯಲ್ಲಿನ ಕೋಳಿ ಸಾಕಣೆ ಕೇಂದ್ರಗಳಲ್ಲಿರುವ ಒಟ್ಟು 20 ಸಾವಿರ ಕೋಳಿಗಳನ್ನು ಹತ್ಯೆ ಮಾಡಲಾಗಿದೆ.