ಕರ್ನಾಟಕ

karnataka

ETV Bharat / bharat

ಜಮ್ಮು ಕಾಶ್ಮೀರದಲ್ಲಿ 6 ಜೈಷ್ ಉಗ್ರರ ಹತ್ಯೆ, ಓರ್ವ ಯೋಧ ಹುತಾತ್ಮ - ದಕ್ಷಿಣ ಕಾಶ್ಮೀರದಲ್ಲಿ ಉಗ್ರರ ಉಪಟಳ

ಜಮ್ಮು ಕಾಶ್ಮೀರದ ಕುಲ್ಗಾಂ ಮತ್ತು ಅನಂತ್​ನಾಗ್ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಆರು ಮಂದಿ ಜೈಷ್ ಉಗ್ರರನ್ನು ಹೊಡೆದುರುಳಿಸಿದ್ದಾರೆ. ಇದೇ ವೇಳೆ ಮೂವರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದು, ಓರ್ವ ಹುತಾತ್ಮರಾಗಿದ್ದಾರೆ.

twin gunfights in South Kashmir: three terrorists killed
Jammu Encounter: ಮೂವರು ಉಗ್ರರ ಹೊಡೆದುರುಳಿಸಿದ ಭದ್ರತಾ ಪಡೆಗಳು

By

Published : Dec 30, 2021, 1:37 AM IST

Updated : Dec 30, 2021, 10:50 AM IST

ಶ್ರೀನಗರ(ಜಮ್ಮು ಕಾಶ್ಮೀರ):ದಕ್ಷಿಣ ಕಾಶ್ಮೀರದ ಕುಲ್ಗಾಮ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಆರು ಮಂದಿ ಜೈಷ್ ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಗೀಡಾದ ಇಬ್ಬರು ಪಾಕಿಸ್ತಾನದವರು ಮತ್ತು ಮತ್ತಿಬ್ಬರು ಸ್ಥಳೀಯ ಉಗ್ರರಾಗಿದ್ದಾರೆ. ಇನ್ನಿಬ್ಬರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ. ಇದೇ ವೇಳೆ, ಮೂವರು ಯೋಧರು ಮತ್ತು ಜಮ್ಮು ಕಾಶ್ಮೀರದ ಓರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ಪೈಕಿ ಗಂಭೀರವಾಗಿ ಗಾಯಗೊಂಡ ಓರ್ವ ಯೋಧ ಚಿಕಿತ್ಸೆ ಫಲಿಸದೆ ಹುತಾತ್ಮರಾದರು ಎಂದರು ತಿಳಿದುಬಂದಿದೆ.

ನಿಖರ ಮಾಹಿತಿಯ ಆಧಾರದ ಮೇಲೆ ಕುಲ್ಗಾಂ ಮಿರ್ಹಾಮಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದ್ದವು. ಸ್ಥಳಕ್ಕೆ ತಲುಪುತ್ತಿದ್ದಂತೆ ಉಗ್ರರು ಗುಂಡು ಹಾರಿಸಿದ್ದು, ಭದ್ರತಾ ಪಡೆ ಪ್ರತಿದಾಳಿ ನಡೆಸಿ, ಮೂವರನ್ನು ಹತ್ಯೆ ಮಾಡಿತ್ತು ಎಂದು ಅಧಿಕಾರಿಗಳು ಈ ಮೊದಲು ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ:ಮಹಾಮಸ್ತಕಾಭಿಷೇಕದ ವೇಳೆ ಕಣ್ತೆರೆದು ನೋಡಿತಾ ಅಯ್ಯಪ್ಪ ಸ್ವಾಮಿ ವಿಗ್ರಹ?.. ವಿಡಿಯೋ ಎಲ್ಲೆಡೆ ವೈರಲ್​!

Last Updated : Dec 30, 2021, 10:50 AM IST

ABOUT THE AUTHOR

...view details