ಉನಾ(ಹಿಮಾಚಲ ಪ್ರದೇಶ):ಹಿಮಾಚಲ ಪ್ರದೇಶದಲ್ಲಿ ವಿಚಿತ್ರ ಮದುವೆ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, 24 ವರ್ಷದ ಯುವಕನೋರ್ವ ಉತ್ತರಾಖಂಡದ ಹುಡುಗನೊಂದಿಗೆ ಮದುವೆ ಮಾಡಿಕೊಂಡಿದ್ದಾನೆ!. ಈ ಪ್ರಕರಣ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಉನಾದಲ್ಲಿ ಈ ಮದುವೆ ನಡೆದಿದೆ. ಫೇಸ್‌ಬುಕ್ ಮೂಲಕ ಪರಸ್ಪರ ಪರಿಚಯವಾದ ಇಬ್ಬರು, ಕಳೆದ ಆರು ತಿಂಗಳ ಹಿಂದೆ ದೆಹಲಿಯ ದೇವಸ್ಥಾನವೊಂದರಲ್ಲಿ ಮದುವೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ವಿವರ:ಸುಮಾರು ಒಂದೂವರೆ ವರ್ಷಗಳ ಹಿಂದೆ ಇಬ್ಬರು ಯುವಕರು ಫೇಸ್ಬುಕ್ನಲ್ಲಿ ಸ್ನೇಹಿತರಾಗಿದ್ದಾರೆ. ಇದಾದ ಬಳಿಕ ಇಬ್ಬರ ನಡುವೆ ಮೊಬೈಲ್ ನಂಬರ್ ಶೇರ್ ಆಗಿದ್ದು, ಪ್ರೀತಿಯ ಬಲೆಗೆ ಬಿದ್ದಿದ್ದಾರೆ. ತದನಂತರ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಇದಕ್ಕೆ ಮನೆಯವರು ವಿರೋಧ ವ್ಯಕ್ತಪಡಿಸುತ್ತಾರೆಂದು ಹೆದರಿ ದೆಹಲಿಗೆ ಹೋಗಿದ್ದು, ದೇವಸ್ಥಾನವೊಂದರಲ್ಲಿ ಮದುವೆ ಮಾಡಿಕೊಂಡು ಮನೆಗೆ ವಾಪಸ್ ಆಗಿದ್ದಾರೆ.