ನವದೆಹಲಿ: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ರೂಪಾಂತರ ಒಮಿಕ್ರೋನ್ ಕರ್ನಾಟಕದಲ್ಲಿ ಪತ್ತೆಯಾಗಿದ್ದು, ಎರಡು ಕೇಸ್ಗಳು ಬೆಂಗಳೂರಿನಲ್ಲಿ ಕಂಡು ಬಂದಿವೆ ಎಂದು ಲವ್ ಅಗರವಾಲ್ ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಈ ಮಾಹಿತಿ ಹಂಚಿಕೊಂಡಿದ್ದಾರೆ. ಇಬ್ಬರು ಕೆಲ ದಿನಗಳ ಹಿಂದೆ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ್ದರು ಎಂಬ ಮಾಹಿತಿ ತಿಳಿಸಿದ್ದಾರೆ.
ಭಾರತಕ್ಕೆ ಲಗ್ಗೆ ಹಾಕಿದ ರೂಪಾಂತರಿ: ಕರ್ನಾಟಕದಲ್ಲಿ ಎರಡು ಒಮಿಕ್ರೋನ್ ಕೇಸ್ ಪತ್ತೆ ಆರೋಗ್ಯ ಸಚಿವಾಲಯ ಸ್ಥಾಪಿಸಿದ 37 ಪ್ರಯೋಗಾಲಯಗಳ INSACOG ಒಕ್ಕೂಟದ ಜೀನೋಮ್ ಅನುಕ್ರಮದಿಂದ ಲಭ್ಯವಾಗಿರುವ ವರದಿ ಪ್ರಕಾರ ಕರ್ನಾಟಕದ ಇಬ್ಬರು ಪುರುಷರಲ್ಲಿ ಒಮಿಕ್ರಾನ್ ಪತ್ತೆಯಾಗಿದೆ.
ಕರ್ನಾಟಕದಲ್ಲಿ 66 ವರ್ಷದ ವೃದ್ಧ ಹಾಗೂ 46 ವರ್ಷದ ವ್ಯಕ್ತಿಯಲ್ಲಿ ಒಮಿಕ್ರೋನ್ ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ಹಂಚಿಕೊಂಡಿದೆ. ಇವರಿಬ್ಬರು ಕಳೆದ ಕೆಲ ದಿನಗಳ ಹಿಂದೆ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ್ದರು. ರಾಜ್ಯ ಆರೋಗ್ಯ ಇಲಾಖೆ ಇವರ ಮೇಲೆ ನಿಗಾ ಇಟ್ಟಿತ್ತು. ಜೊತೆಗೆ ಪರೀಕ್ಷೆಗೊಳಪಡಿಸಲಾಗಿತ್ತು. ಇದರ ಜೊತೆಗೆ 29 ಬೇರೆ ಬೇರೆ ದೇಶಗಳಲ್ಲಿ 373 ಒಮಿಕ್ರೋನ್ ಕೇಸ್ ಪತ್ತೆಯಾಗಿವೆ ಎಂಬ ಮಾಹಿತಿಯನ್ನ ಕೇಂದ್ರ ಆರೋಗ್ಯ ಇಲಾಖೆ ನೀಡಿದೆ.
ಒಮಿಕ್ರೋನ್ ಕೇಸ್ ಪತ್ತೆಯಾಗಿರುವುದರಿಂದ ಯಾವುದೇ ರೀತಿಯ ಆತಂಕಕ್ಕೊಳಗಾಗುವ ಅವಶ್ಯಕತೆ ಇಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಹಂಚಿಕೊಂಡಿದೆ.