ಅಹಮದಾಬಾದ್(ಗುಜರಾತ್):ಬೀಗ ಹಾಕಿದ ಮನೆವೊಂದರಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಶವವಾಗಿ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಇದೊಂದು ಕೊಲೆಯಂತಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಅಹಮದಾಬಾದ್ನ ಓಧವ್ ಪ್ರದೇಶದ ದಿವ್ಯ ಪ್ರಭಾ ಹೌಸಿಂಗ್ ಸೊಸೈಟಿಯಲ್ಲಿರುವ ಮನೆಯಲ್ಲಿ ಘಟನೆ ನಡೆದಿದೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಹರಿತವಾದ ಆಯುಧಗಳಿಂದ ಇವರ ಮೇಲೆ ದಾಳಿ ಮಾಡಿರುವ ಸಾಧ್ಯತೆ ಇದೆ. ಕಳೆದ ನಾಲ್ಕೈದು ದಿನಗಳ ಹಿಂದೆ ಕೃತ್ಯ ನಡೆದಿದೆ ಎನ್ನಲಾಗಿದ್ದು, ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ಕಂಡುಬಂದಿವೆ. ಕಳೆದ ಕೆಲ ದಿನಗಳಿಂದ ತಮ್ಮ ಮಗಳು ಕಾಣೆಯಾಗಿದ್ದು, ಆಕೆ ವಾಸ ಮಾಡುತ್ತಿದ್ದ ಮನೆಗೆ ಹೊರಗಡೆಯಿಂದ ಬೀಗ ಹಾಕಲಾಗಿದೆ ಎಂದು ಸೋನಾಲ್ಬೆನ್ ತಾಯಿ ಪೊಲೀಸರಿಗೆ ದೂರು ನೀಡುತ್ತಿದ್ದಂತೆ ಘಟನೆ ಬೆಳಕಿಗೆ ಬಂದಿದೆ.