ಅನಂತನಾಗ್ (ಜಮ್ಮು ಮತ್ತು ಕಾಶ್ಮೀರ):ಅನಂತನಾಗ್ ಜಿಲ್ಲೆಯ ಬಿಜ್‌ಬೆಹರಾದಲ್ಲಿ ಸಿಆರ್ಪಿಎಫ್ ಯೋಧರನ್ನು ಗುರಿಯಾಗಿಸಿ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ.
ಘಟನೆಯ ಮಾಹಿತಿ ತಿಳಿದ ಅನಂತನಾಗ್ ಪೊಲೀಸರು ಭಾನುವಾರ ಸಂಜೆ 7.30ರ ಸುಮಾರಿಗೆ 'ಭಯೋತ್ಪಾದಕ ಅಪರಾಧ' ನಡೆದ ಮುಖ್ಯ ಚೌಕ್ ಸಂಗಮ್ ಪ್ರದೇಶಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ಪ್ರಾಥಮಿಕ ತನಿಖೆಯಲ್ಲಿ 96ಬಿಎನ್ ಸಿಆರ್‌ಪಿಎಫ್‌ನ ಬಂಕರ್ ಮೇಲೆ ಭಯೋತ್ಪಾದಕರು ಗ್ರೆನೇಡ್ ಎಸೆದಿರುವುದಾಗಿ ತಿಳಿದು ಬಂದಿದೆ. ಆದರೆ, ಗ್ರೆನೇಡ್ ಉದ್ದೇಶಿತ ಗುರಿತಪ್ಪಿ ರಸ್ತೆಯಲ್ಲಿ ಸ್ಫೋಟಗೊಂಡಿದ್ದು, ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ.