ಮುಂಬೈ:ಮಹಾರಾಷ್ಟ್ರದ ಸಚಿವರಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಅವರು ಡಿ.3 ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಈ ವೇಳೆ ಅವರು ಮಧ್ಯವರ್ತಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಕಾರ್ಯಕರ್ತರನ್ನು ಭೇಟಿ ಮಾಡಿ, ಕರ್ನಾಟಕದೊಂದಿಗಿನ ದಶಕಗಳ ಗಡಿ ವಿವಾದದ ಬಗ್ಗೆ ಮಾತುಕತೆ ನಡೆಸಲಿದ್ದಾರೆ.
ಪಾಟೀಲ್ ಮತ್ತು ದೇಸಾಯಿ ಅವರನ್ನು ಗಡಿಭಾಗದ ಸಮನ್ವಯ ಸಚಿವರನ್ನಾಗಿ ನೇಮಿಸಲಾಗಿದೆ. ಉಭಯ ರಾಜ್ಯಗಳ ನಡುವಿನ ಗಡಿ ವಿವಾದದ ಕುರಿತು ನ್ಯಾಯಾಲಯದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ತಂಡದೊಂದಿಗೆ ಸಮನ್ವಯ ಸಾಧಿಸುವ ಉದ್ದೇಶದೊಂದಿಗೆ ಸಚಿವರು ಬರುತ್ತಿದ್ದಾರೆ.