ನವದೆಹಲಿ:ದೆಹಲಿಯ ಖಜೂರಿ ಖಾಸ್ ಪ್ರದೇಶದಲ್ಲಿ ಇಂದು ಮುಂಜಾನೆ ನಡೆದ ಪೊಲೀಸ್ ಎನ್ಕೌಂಟರ್ನಲ್ಲಿ ಇಬ್ಬರು ಅಪರಾಧಿಗಳನ್ನು ಹತ್ಯೆ ಮಾಡಲಾಗಿದೆ. ಈ ಜೋಡಿ ಕ್ರಿಮಿನಲ್ಗಳು ಅನೇಕ ಕೊಲೆ ಮತ್ತು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಅಮೀರ್ ಖಾನ್ ಮತ್ತು ರಾಜ್ ಮಾನ್ ಮೃತ ಅಪರಾಧಿಗಳಾಗಿದ್ದು, ಇವರಿಂದ 1.5 ಲಕ್ಷ ನಗದು, 2 ಸ್ವಯಂಚಾಲಿತ ಪಿಸ್ತೂಲ್, 4 ಮ್ಯಾಗಜೀನ್ ಮತ್ತು 15 ಲೈವ್ ಕಾರ್ಟ್ರಿಡ್ಜ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್ನು ಗುಂಡಿನ ಚಕಮಕಿ ವೇಳೆ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಸಹ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.