ಕರ್ನಾಟಕ

karnataka

ETV Bharat / bharat

ಪುಣೆ ಮಾರುಕಟ್ಟೆ ಆವರಣದ ಹೋಟೆಲ್​ನಲ್ಲಿ ಅಗ್ನಿ ಅವಘಡ: ಇಬ್ಬರ ಸಾವು, ಮತ್ತೋರ್ವನಿಗೆ ಗಂಭೀರ ಗಾಯ - ಮಹಾರಾಷ್ಟ್ರ

fire incident: ರಾತ್ರಿ 1 ಗಂಟೆ ಸುಮಾರಿಗೆ ಪುಣೆ ಮಾರ್ಕೆಟ್ ಆವರಣದಲ್ಲಿರುವ ಹೋಟೆಲ್​ವೊಂದರಲ್ಲಿ ಕಾಣಿಸಿಕೊಂಡಿದ್ದು, ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

fire incident in Pune market yard
ಹೋಟೆಲ್​ನಲ್ಲಿ ಅಗ್ನಿ ಅವಘಡ

By

Published : Jun 13, 2023, 10:31 AM IST

ಪುಣೆ(ಮಹಾರಾಷ್ಟ್ರ): ಪುಣೆಯ ಮಾರುಕಟ್ಟೆ ಆವರಣದಲ್ಲಿ ಮತ್ತೊಮ್ಮೆ ಅಗ್ನಿ ಅವಘಡ ನಡೆದಿದೆ. ಘಟನೆಯಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿ, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾತ್ರಿ 1 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ. ತಕ್ಷಣ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ಧಾರೆ.

ಇದನ್ನೂ ಓದಿ:ಚಾಮುಂಡಿ ಬೆಟ್ಟ ತಪ್ಪಲಿನ ಶಾಮಿಯಾನ ಗೋದಾಮಿನಲ್ಲಿ ಬೆಂಕಿ- ವಿಡಿಯೋ

ಅಗ್ನಿಶಾಮಕ ಸಿಬ್ಬಂದಿ ಹೋಟೆಲ್‌ನಿಂದ ಒಬ್ಬ ಕಾರ್ಮಿಕನನ್ನು ರಕ್ಷಿಸಿ ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಘಟನೆ ನಡೆದಾಗ ಹೋಟೆಲ್‌ನಲ್ಲಿ ಒಟ್ಟು ಮೂವರು ಕಾರ್ಮಿಕರು ಇದ್ದರು. ಅವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಆದರೆ, ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಒಬ್ಬ ಕಾರ್ಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ. ಪುಣೆಯ ಪ್ರಮುಖ ಭಾಗಗಳಲ್ಲಿ ಪದೇ ಪದೆ ಅಗ್ನಿ ಅವಘಡಗಳು ಸಂಭವಿಸುತ್ತಿವೆ. ಕೆಲ ದಿನಗಳ ಹಿಂದೆ ಪುಣೆಯ ಟಿಂಬರ್ ಮಾರ್ಕೆಟ್​​ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತ್ತು. ಘಟನೆಯಲ್ಲಿ ಹಲವು ಅಂಗಡಿಗಳಿಗೆ ಹಾನಿಯಾಗಿತ್ತು. ಆದರೆ, ಅದರಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ. ಆದರೆ ರಾತ್ರಿ ನಡೆದ ಘಟನೆಯಲ್ಲಿ ಅಪಾರ ಪ್ರಾಣಹಾನಿ ಸಂಭವಿಸಿದೆ.

ಇದನ್ನೂ ಓದಿ:ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ವಿಡಿಯೋ

ಪ್ರಮುಖವಾಗಿ ದೊಡ್ಡ ಮಾರುಕಟ್ಟೆಗಳಿರುವ ಪುಣೆಯಲ್ಲಿ ಆಗಾಗ ಬೆಂಕಿ ಅವಘಡಗಳು ಸಂಭವಿಸುತ್ತಿರುತ್ತವೆ. ಅಂಗಡಿಯವರು ಹಾಗೂ ಜನರು ಈ ಬಗ್ಗೆ ಕಾಳಜಿ ವಹಿಸಬೇಕಾಗಿದೆ. ಮುಖ್ಯವಾಗಿ ಅಗ್ನಿಶಾಮಕ ಆಡಿಟ್ ನಡೆಸಲು ಅಗತ್ಯವಾದಾಗ, ಕೆಲವು ಸ್ಥಳಗಳಲ್ಲಿ ಆಡಿಟ್ ಮಾಡಲಾಗುವುದಿಲ್ಲ. ಇದರಿಂದ ಇಂತಹ ಬೆಂಕಿ ಅವಘಡಗಳು ಸಂಭವಿಸಲು ಕಾರಣವಾಗಿದೆ. ಸಮಯಕ್ಕೆ ಸರಿಯಾಗಿ ಲೆಕ್ಕಪರಿಶೋಧನೆ ನಡೆಸಿದರೆ ಇಂತಹ ಘಟನೆಗಳನ್ನು ತಪ್ಪಿಸಬಹುದು. ಬೆಂಕಿ ಅವಘಡಗಳು ನಿರಂತರವಾಗಿ ನಡೆಯುತ್ತಿದ್ದು, ಸಾಕಷ್ಟು ಹಾನಿ ಸಂಭವಿಸಿರುವುದು ಕಂಡು ಬಂದಿದೆ. ಕಳೆದ ಒಂದು ತಿಂಗಳಿನಿಂದ ಮಾರುಕಟ್ಟೆ ಆವರಣದಲ್ಲಿ ಸರಣಿ ಬೆಂಕಿ ಅವಘಡಗಳು ವರದಿಯಾಗಿವೆ. ಇತ್ತೀಚೆಗೆ ಈ ಪ್ರದೇಶದಲ್ಲಿನ ಗೋಡೌನ್‌ಗಳು ಬೆಂಕಿಗೆ ಆಹುತಿಯಾಗಿ ಜೀವ ಮತ್ತು ವಸ್ತುಗಳ ತೀವ್ರ ನಷ್ಟಕ್ಕೆ ಕಾರಣವಾಗಿತ್ತು.

5 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ:ಮುಂಬೈನ ಝವೇರಿ ಬಜಾರ್ ಪ್ರದೇಶದಲ್ಲಿರುವ ಐದು ಅಂತಸ್ತಿನ ಕಟ್ಟಡದಲ್ಲಿ ಇತ್ತೀಚೆಗೆ ಭಾರಿ ಅಗ್ನಿ ಅವಘಡ ಸಂಭವಿಸಿತ್ತು. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ 12ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದವು. ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕಟ್ಟಡದಲ್ಲಿ ಸಿಲುಕಿದ್ದ 50 ರಿಂದ 60 ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿತ್ತು.

ಇದನ್ನೂ ಓದಿ:Massive fire: ಮುಂಬೈನ ಐದು ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ - ವಿಡಿಯೋ

ABOUT THE AUTHOR

...view details