ಯಾದಗಿರಿಗುಟ್ಟ(ತೆಲಂಗಾಣ):ಎರಡಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದು ನಾಲ್ವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ತೆಲಂಗಾಣದ ಯಾದಗಿರಿಗುಟ್ಟದಲ್ಲಿ ನಡೆದಿದೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದು, ಹಲವರು ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡಿದ್ದಾಗಿ ತಿಳಿದು ಬಂದಿದೆ.
ತೆಲಂಗಾಣ: ಎರಡಂತಸ್ತಿನ ಕಟ್ಟಡ ಕುಸಿದು ನಾಲ್ವರು ದುರ್ಮರಣ - ಎರಡಂತಸ್ತಿನ ಕಟ್ಟಡ ಕುಸಿದು ನಾಲ್ವರು ದುರ್ಮರಣ
ತೆಲಂಗಾಣದ ಯಾದಗಿರಿಗುಟ್ಟದಲ್ಲಿನ ಎರಡಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿರುವ ಪರಿಣಾಮ ನಾಲ್ವರು ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ.
Two Floor building collapsed
ಕುಸಿತಗೊಂಡಿರುವ ಬಿಲ್ಡಿಂಗ್ನಲ್ಲಿ ಅನೇಕ ಅಂಗಡಿ, ಹಾಗೂ ಕುಟುಂಬಗಳು ವಾಸವಾಗಿದ್ದವು ಎಂದು ತಿಳಿದು ಬಂದಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗ್ತಿದೆ. ಘಟನೆಯಲ್ಲಿ ಗಾಯಗೊಂಡಿರುವವರನ್ನು ಭುವನಗಿರಿ ಏರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ 30 ವರ್ಷಗಳ ಹಿಂದೆ ಈ ಬಿಲ್ಡಿಂಗ್ ಕಟ್ಟಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.