ಮುಂಬೈ: ಮುಂಬೈ ವಿಮಾನ ನಿಲ್ದಾಣದಲ್ಲಿ ಅಂದಾಜ 25 ಕೋಟಿ ಮೌಲ್ಯದ 5 ಕೆಜಿ ಹೆರಾಯಿನ್ ಡ್ರಗ್ಸ್ ವಶಪಡಿಸಿಕೊಂಡ ಕಸ್ಟಮ್ಸ್ ಇಲಾಖೆ ಇಬ್ಬರು ವಿದೇಶಿ ಮಹಿಳೆಯರನ್ನು ಬಂಧಿಸಿದ್ದಾರೆ.
ವಿದೇಶಿ ಮಹಿಳೆಯರು ತಮ್ಮ ಬ್ಯಾಗ್ಗಳಲ್ಲಿ ಮಾದಕ ದ್ರವ್ಯಗಳನ್ನು ಅಡಗಿಸಿಟ್ಟು ಸಾಗಿಸುತ್ತಿದ್ದು, ಅದನ್ನು ಕಸ್ಟಮ್ಸ್ ಇಲಾಖೆ ವಶಕ್ಕೆ ಪಡೆದಿದೆ. ಇಬ್ಬರೂ ಮಹಿಳೆಯರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.